![sumalatha](http://kannada.vartamitra.com/wp-content/uploads/2019/02/sumalatha-600x381.jpg)
ಮಂಡ್ಯ,ಮಾ.26- ನಾನು ಮಾತನಾಡುವುದಿಲ್ಲ. ನನ್ನ ಕೆಲಸವೇ ಮಾತನಾಡುತ್ತದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರೋಕ್ಷವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಟಾಂಗ್ ನೀಡಿದ್ದಾರೆ.
ಇಂದು ಕೆಆರ್ಎಸ್ ಬಳಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಮಾತನಾಡಿದ ಅವರು, ಅಂಬರೀಶ್ ಸಹ ಜನರಿಗಾಗಿ ಸಾಕಷ್ಟುಕೆಲಸ ಮಾಡಿದ್ದಾರೆ. ಆ ಬಗ್ಗೆ ಅವರು ಹೇಳಿಕೊಳ್ಳುತ್ತಿರಲಿಲ್ಲ. ಅದೇ ರೀತಿ ನಾನು ಸಹ ಮಾತನಾಡುವುದಿಲ್ಲ. ನನ್ನ ಕೆಲಸಗಳೇ ಎಲ್ಲವನ್ನು ಹೇಳುತ್ತವೆ ಎಂದರು.
ನಮ್ಮ ಕೆಲಸಗಳೇ ನಮ್ಮನ್ನು ಗುರುತಿಸುವಂತಾಗಬೇಕು. ಆ ರೀತಿ ಕೆಲಸ ಮಾಡುತ್ತೇನೆ. ತಾನು ಚುನಾವಣೆಗೆ ನಿಂತಿರುವುದು ಜಾತಿ ರಾಜಕಾರಣಕ್ಕಾಗಿ ಅಲ್ಲ ಎಂದು ಸುಮಲತಾ ಸ್ಪಷ್ಟಪಡಿಸಿದ್ದಾರೆ.