ನಟಿ, ಮಾಜಿ ಸಂಸದೆ ಜಯಪ್ರದಾ ಬಿಜೆಪಿಗೆ ಸೇರ್ಪಡೆ

ನವದೆಹಲಿ: ನಟಿ, ಮಾಜಿ ಸಂಸದೆ ಜಯಪ್ರದಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ರಾಮ್‍ಪುರ ಕ್ಷೇತ್ರದಿಂದ ಆಜಂ ಖಾನ್ ವಿರುದ್ಧ ಸ್ಪರ್ಧಿಸುವ ಸಾಧ್ಯತೆಯಿದೆ.

ನವದೆಹಲಿಯ ಪಕ್ಷದ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಗೊಂಡ ಜಯಪ್ರದ, ಸಿನಿಮಾ ಆಗಲೀ ರಾಜಕೀಯವಾಗಲಿ ನಾನು ನನ್ನ ಜೀವನವನ್ನು ಬದ್ಧತೆಯಿಂದ ಸಮರ್ಪಿಸಿದ್ದೇನೆ. ದೇಶ ಯಾರ ಕೈಲಿ ಸುರಕ್ಷಿತವಾಗಿದೆ ಎಂದು ಭಾವಿಸಲಾಗುತ್ತದೆಯೋ ಅಂತಹ ಧೈರ್ಯಶಾಲಿ ನಾಯಕನ ಜೊತೆಗೆ ಕೆಲಸ ಮಾಡುತ್ತಿದ್ದೇನೆ. ಇದಕ್ಕಾಗಿ ಅವಕಾಶ ನೀಡಿದ ಅಮಿತ್ ಶಾ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಜಯಪ್ರದ ಉತ್ತರ ಪ್ರದೇಶದ ರಾಮ್ ಪುರದಿಂದ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ವಿರುದ್ಧ ಸ್ಪರ್ಧಿಸುವ ಸಾಧ್ಯತೆ ಇದೆ.

ಮೂಲತಃ ಆಂಧ್ರಪ್ರದೇಶದ ರಾಜಮುಂಡ್ರಿಯವರಾದ ಜಯಪ್ರದಾ ಅವರು 1994ರಲ್ಲಿ ತೆಲುಗು ದೇಶಂ ಪಾರ್ಟಿ ಮೂಲಕ ರಾಜಕೀಯಕ್ಕೆ ಕಾಲಿಟ್ಟಿದ್ದರು. ಬಳಿಕ 1996ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅವರು ಟಿಡಿಪಿಯ ಮಹಿಳಾ ಘಟಕದ ಅಧ್ಯಕ್ಷೆ ಆಗಿಯೂ ಸೇವೆ ಸಲ್ಲಿಸಿದ್ದರು. ನಂತರ 2004ರಲ್ಲಿ ತೆಲುಗು ದೇಶಂ ಪಾರ್ಟಿ ಬಿಟ್ಟು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಹಾಗೆಯೇ ಉತ್ತರ ಪ್ರದೇಶದ ರಾಮ್‍ಪುರ ಲೋಕಸಭಾ ಕ್ಷೇತ್ರದಿಂದ 2004 ಹಾಗೂ 2009ರ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದ್ದರು. ತದನಂತರ 2014ರ ಲೋಕಸಭೆ ಚುನಾವಣೆ ವೇಳೆ ಅಮರ್ ಸಿಂಗ್ ಜತೆ ಆರ್‍ಎಲ್‍ಡಿ ಪಕ್ಷ ಸೇರಿ, ಬಿಜ್ನೂರ್ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

jayaprada joins bjp may contest from rampur

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ