ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 10ನೇ ಪಟ್ಟಿ ಬಿಡುಗಡೆ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 10ನೇ ಪಟ್ಟಿ ಬಿಡುಗಡೆಮಾಡಿದ್ದು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ 39 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

ಆದರೆ ಕರ್ನಾಟಕದಲ್ಲಿ ಬಾಕಿ ಉಳಿದಿರುವ ಕ್ಷೇತ್ರಗಳಿಗೆ ಬಿಜೆಪಿ ಈ ಪಟ್ಟಿಯಲ್ಲೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ.

ಸಚಿವೆ ಮನೇಕಾ ಗಾಂಧಿ ಸುಲ್ತಾನ್​ ಪುರ ಕ್ಷೇತ್ರದಿಂದ, ಸಂಸದ ವರುಣ್​ ಗಾಂಧಿ ಫಿಲಿಭಿಟ್​ನಿಂದ ಸ್ಪರ್ಧಿಸಲಿದ್ದಾರೆ. ಇಂದು ಬಿಜೆಪಿಗೆ ಸೇರ್ಪಡೆಯಾದ ಜಯಪ್ರದಾ ಅವರಿಗೆ ರಾಂಪುರದಿಂದ ಟಿಕೆಟ್​ ನೀಡಲಾಗಿದೆ.

Lok Sabha Elections: BJP releases 10th list of 39 candidates

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ