ತೇಜಸ್ವಿನಿ ಅನಂತಕುಮಾರ್ ಅವರಿಗೆ ಕೊನೆ ಘಳಿಗೆಯಲ್ಲಿ ತಪ್ಪಿದ ಟಿಕೆಟ್-ದೆಹಲಿಯಲ್ಲಿ ಏನಾಯಿತೋ ನಮಗೂ ಸರಿಯಾಗಿ ಗೊತ್ತಿಲ್ಲ-ಯಡಿಯೂರಪ್ಪ

ಬೆಂಗಳೂರು,ಮಾ.26- ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರ ಸಚಿವ ದಿವಂಗತ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಲಾಗಿತ್ತು. ಕೊನೆಯ ಘಳಿಗೆಯಲ್ಲಿ ಯಾವ ಕಾರಣಕ್ಕೆ ಟಿಕೆಟ್ ತಪ್ಪಿದೆ ಎಂಬುದು ನನಗೂ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿನಿ ಅನಂತಕುಮಾರ್ ಅವರ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿತ್ತು.

ದೆಹಲಿಯಲ್ಲಿ ಏನಾಯಿತೋ ನಮಗೂ ಸರಿಯಾಗಿ ಗೊತ್ತಿಲ್ಲ.

ವರಿಷ್ಠರು ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ತೇಜಸ್ವಿ ಸೂರ್ಯ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ.ಅಲ್ಲದೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ವಿಧಾನಪರಿಷತ್ ಮಾಜಿ ಸದಸ್ಯ ಅಶ್ವಥ್‍ನಾರಾಯಣ ಅವರನ್ನು ಪ್ರಕಟಿಸಿದೆ.

ಈ ಇಬ್ಬರು ಅಭ್ಯರ್ಥಿಗಳಿಗೆ ಬಿ ಫಾರಂ ನೀಡಿ ನಾಮಪತ್ರ ಸಲ್ಲಿಸಲು ನಿರ್ದೇಶನ ನೀಡಲಾಗಿದೆ.2ನೇ ಹಂತದಲ್ಲಿ ಚುನಾವಣೆ ನಡೆಯುವ ಉಳಿದ 14 ಕ್ಷೇತ್ರಗಳಿಗೆ ಇನ್ನು ಕಾಲಾವಕಾಶವಿದೆ ಎಂದು ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ