ಫ್ಲೈಯಿಂಗ್ ಸ್ಕ್ವಾಡ್ ಮತ್ತು ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳಿಂದ 273819529/- ರೂ. ವಶ-ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್

ಬೆಂಗಳೂರು,ಮಾ.27- ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಫ್ಲೈಯಿಂಗ್ ಸ್ಕ್ವಾಡ್, ಸ್ಟಾಟಿಕ್ ಸರ್ವೆಲೆನ್ಸ್ ತಂಡ ಸೇರಿದಂತೆ ಎಲ್ಲ ತಂಡಗಳು 27,38,19,529 ರೂ. ಮೌಲ್ಯದ ನಗದು, ಮಾದಕ ದ್ರವ್ಯ, ಮದ್ಯ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಫ್ಲೈಯಿಂಗ್ ಸ್ಕ್ವಾಡ್‍ಗಳು, ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ರಾಜ್ಯದ ವಿವಿಧೆಡೆ 4.47 ಕೋಟಿ ನಗದು, 24.25 ಲಕ್ಷ ಮೌಲ್ಯದ 2,359 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿವೆ.

5.64 ಲಕ್ಷ ಮೌಲ್ಯದ 129.19 ಕೆಜಿ ಮಾದಕ ದ್ರವ್ಯಗಳನ್ನು ಹಾಗೂ 23.87 ಲಕ್ಷ ಮೌಲ್ಯದ ಇತರೆ ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

264 ಎಫ್‍ಐಆರ್ ದಾಖಲಿಸಿದ್ದು, ಆದಾಯ ತೆರಿಗೆ ಇಲಾಖೆಯು 1.67 ಕೋಟಿ ಮೌಲ್ಯದ ನಗದನ್ನು ವಶಪಡಿಸಿಕೊಂಡಿದೆ ಎಂದು ಹೇಳಿದರು.

95,081 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದ್ದು, ಏಳು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡು, 6 ಶಸ್ತ್ರಾಸ್ತ್ರಗಳ ಪರವಾನಗಿ ರದ್ದುಪಡಿಸಲಾಗಿದೆ.

ಚುನಾವಣೆ ಘೋಷಣೆಯಾದ ದಿನದಿಂದ ಈ ತನಕ 27,892 ಜಾಮೀನು ರಹಿತ ವಾರೆಂಟ್‍ಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

ಮತದಾರರ ಸಹಾಯವಾಣಿ ಮೂಲಕ 48,885 ಕರೆಗಳಲ್ಲಿ 42,494 ಸಾರ್ವಜನಿಕರು ಮಾಹಿತಿ ಕೋರಿದ್ದಾರೆ.438 ಜನರು ಫೀಡ್‍ಬ್ಯಾಕ್ ನೀಡಿದ್ದಾರೆ.

ಎನ್‍ಜಿಆರ್‍ಎಸ್ ಹೋಟೆಲ್‍ನಲ್ಲಿ 4510 ದೂರುಗಳನ್ನು ದಾಖಲಿಸಿದ್ದು, 3265 ದೂರಗಳನ್ನು ಇತ್ಯರ್ಥಪಡಿಸಲಾಗಿದೆ. ಸಿ ವಿಜಿಲ್ ಅಪ್ಲಿಕೇಶನ್ ಮೂಲಕ 878 ದೂರುಗಳನ್ನು ಸ್ವೀಕರಿಸಲಾಗಿದ್ದು, ಈ ಮೂಲ 165 ದೂರುಗಳು ವಾಸ್ತವವಾಗಿದ್ದು, ಸೂಕ್ತ ಕ್ರಮ ಜರುಗಿಸಲಾಗಿದೆ.

ಸುವಿಧ ಮೂಲಕ ಅನುಮತಿಗಾಗಿ 936 ಅರ್ಜಿ ಸ್ವೀಕರಿಸಿದ್ದು, 677 ಅರ್ಜಿಗಳಿಗೆ ಅನುಮತಿ ನೀಡಲಾಗಿದೆ.120 ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ