ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಹತ್ವದ ಸಭೆ

ಬೆಂಗಳೂರು, ಮಾ.27-ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳ ಚುನಾವಣಾ ಕಾರ್ಯತಂತ್ರದ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿಂದು ಮಹತ್ವದ ಸಭೆ ನಡೆಯಿತು.
ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಅಭ್ಯರ್ಥಿ ಕೃಷ್ಣಭೆರೇಗೌಡ, ಶಾಸಕರಾದ ಎಸ್.ಟಿ.ಸೋಮಶೇಖರ್, ಅಖಂಡ ಶ್ರೀನಿವಾಸಮೂರ್ತಿ, ಭೆರತಿ ಬಸವರಾಜ್, ಬೈರತಿಸುರೇಶ್ ಅವರು ಭಾಗವಹಿಸಿದ್ದರು.

ಲೋಕಸಭೆ ಚುನಾವಣಾ ಪೂರ್ವ ಮೈತ್ರಿಯಲ್ಲಿ ಜೆಡಿಎಸ್ ಪಾಲಾಗಿದ್ದ ಬೆಂಗಳೂರು ಉತ್ತರ ಕ್ಷೇತ್ರ ಕೊನೆಯ ಕ್ಷಣದಲ್ಲಿ ಮತ್ತೆ ಕಾಂಗ್ರೆಸ್‍ಗೆ ಸಿಕ್ಕಿದೆ. ಸಚಿವ ಕೃಷ್ಣಭೆರೇಗೌಡ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.ಈ ಕ್ಷೇತ್ರವನ್ನು ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ನಾಯಕರು ಇಂದು ಪ್ರಮುಖ ನಾಯಕರ ಸಭೆ ನಡೆಸಿದರು.

ಬಿಬಿಎಂಪಿ ಸದಸ್ಯರು ಹಾಗೂ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.

ಸದಾನಂದಗೌಡರು ಐದು ವರ್ಷ ಸಂಸದರಾಗಿ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿಲ್ಲ.ಇದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು.ಕಾಂಗ್ರೆಸ್ ತನ್ನದೇ ಆದ ಭರವಸೆಗಳ ಮೂಲಕ ಮತದಾರರನ್ನು ಸೆಳೆಯಬೇಕು.ಇಂದಿನಿಂದ ಸಮರೋಪಾದಿಯಲ್ಲಿ ಕ್ಷೇತ್ರದಾದ್ಯಂತ ವ್ಯಾಪಕ ಪ್ರಚಾರ ಕೈಗೊಳ್ಳಬೇಕೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಸಲಹೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ