ಮಾಜಿ ಪಿಎಂ. ದೇವೇಗೌಡ ಮತ್ತು ಮಾಜಿ ಸಿ.ಎಂ.ಸಿದ್ದರಾಮಯ್ಯ ಧೃತರಾಷ್ಟ್ರರಿದ್ದಂತೆ-ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ

ಬಾಗಲಕೋಟೆ, ಮಾ.27- ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧೃತರಾಷ್ಟ್ರರಿದ್ದಂತೆ.ಭವಿಷ್ಯದಲ್ಲಿ ಅವರ ಎರಡೂ ಪಕ್ಷಗಳು ನಾಶವಾಗಲಿವೆ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ಇಂದಿಲ್ಲಿ ಹೇಳಿದರು.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಇಬ್ಬರು ದೃತರಾಷ್ಟ್ರರ ಆಲಿಂಗನದಿಂದ ಎರಡು ಪಕ್ಷಗಳು ಪತನವಾಗುವುದರಲ್ಲಿ ಅನುಮಾನವಿಲ್ಲ ಎಂದರು.

ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ಪತನವಾಗುತ್ತದೆ ಎಂಬ ಭಯದಿಂದ ಎಚ್.ಡಿ.ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಇಬ್ಬರೂ ಒಂದಾಗಿದ್ದಾರೆ. ಮೊದಲು ಈ ಇಬ್ಬರು ಹಾವು ಮುಂಗುಸಿಗಳಂತಿದ್ದರು.ಈಗ ಅಧಿಕಾರಕ್ಕಾಗಿ ಒಂದಾಗಿದ್ದಾರೆ ಎಂದು ಹೇಳಿದರು.

ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಟಿಕೆಟ್ ನೀಡದಿರುವುದಕ್ಕೆ ಬೇಸರವಾಗಿದೆ.ಆದರೆ ವರಿಷ್ಠರ ನಿರ್ಧಾರವನ್ನು ನಾವು ಗೌರವಿಸಬೇಕೆಂದು ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ