ಬೆಂಗಳೂರು,ಮಾ.27- ರಾಜ್ಯದ ಎರಡನೇ ಹಂತದಲ್ಲಿ ಚುನಾವಣೆ ನಡೆಯುವ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಅಧಿಸೂಚನೆ ಹೊರಬೀಳಲಿದ್ದು ನಾಳೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬೀದರ್, ದಾವಣಗೆರೆ, ಹಾವೇರಿ, ಬಳ್ಳಾರಿ, ರಾಯಚೂರು, ಕೊಪ್ಪಳ, ಕಲಬುರಗಿ, ವಿಜಾಪುರ, ಧಾರವಾಡ, ಉತ್ತರಕನ್ನಡ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಆಯಾ ಚುನಾವಣಾಧಿಕಾರಿಗಳು ನಾಳೆ ಅಧಿಸೂಚನೆ ಹೊರಡಿಸಲಿದ್ದಾರೆ.
ಪ್ರಮುಖ ರಾಜಕೀಯ ಪಕ್ಷಗಳು ಈಗಾಗಲೇ ಬಹುತೇಕ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಪ್ರಕಟಿಸಿರುವುದರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯೂ ಚುರುಕಾಗಲಿದೆ.
ನಾಳೆಯಿಂದ ಏ.4ರವರೆಗೂ ನಾಮಪತ್ರ ಸಲ್ಲಿಸಲು ಕಾಲಾವಕಾಶವಿದ್ದು,ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.8ರವರೆಗೂ ನಾಮಪತ್ರ ಹಿಂಪಡೆಯಲು ಕಾಲಾವಕಾಶವಿದೆ.ಏ.23ರಂದು ಮತದಾನ ನಡೆಯಲಿದ್ದು, ಮೇ23ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.