ಐಟಿ ದಾಳಿ ಖಂಡಿಸಿ ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ಐಟಿ ದಾಳಿ ಖಂಡಿಸಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಆದಾಯ ತೆರಿಗೆ ಇಲಾಖೆ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಎನ್ ಡಿ ಎ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಬೆಂಗಳೂರಿನ ಐಟಿ ಕಛೇರಿ ಮುಂದೆ ಜಮಾವಣೆಗೊಮ್ಡಿರುವ ಸಾವಿರಾರು ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ನರೇಂದ್ರ ಮೋದಿ ಹಠಾವೋ, ಭಾರತ್ ಬಚಾವೋ, ತೊಲಗಲಿ ತೊಲಗಲಿ ಎನ್ ಡಿಎ ತೊಲಗಲಿ, ಡೌನ್ ಡೌನ್ ಬಿಜೆಪಿ ಡೌನ್… ಎಂಬ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾಕಾರರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.

ಈ ನಡವೆ ಐಟಿ ದಾಳಿ ವಿರುದ್ಧ ಪ್ರತಿಭಟನೆ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೇಂದ್ರ ಸರ್ಕಾರ ಯಾರನ್ನು ಬೇಕಾದರೂ ಅರೆಸ್ಟ್ ಮಾಡಲಿ, ಆರ್ಮಿಗಳನ್ನೇ ಬೇಕಾದರೂ ತಂದು ಕೂರಿಸಲಿ, ನಾವು ಪ್ರತಿಭಟನೆ ಮಾಡುತ್ತೇವೆ. ಅದೇನಾಗುತ್ತದೆ ನೋಡೇ ಬಿಡೋಣ ಎಂದು ಸವಾಲು ಹಾಕಿದ್ದಾರೆ.

IT Raide,Congress-JDS Protest,Bangalore

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ