ಸಿಆರ್‍ಪಿಎಫ್ ಯೋಧರ ಭದ್ರತೆಯಲ್ಲಿ ದಾಳಿ ನಡೆಸಿದ ಐಟಿ ಇಲಾಖೆ

ಬೆಂಗಳೂರು,ಮಾ.28-ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ರಾಜ್ಯದ ವಿವಿಧ ಕಡೆ ದಾಳಿ ನಡೆಸಿದ ವೇಳೆ ಸಿಆರ್‍ಪಿಎಫ್ ಯೋಧರನ್ನು ಭದ್ರತೆಗೆ ನಿಯೋಜಿಸಿದ್ದು ವಿಶೇಷವಾಗಿತ್ತು.

ಸಾಮಾನ್ಯವಾಗಿ ಐಟಿ ಅಧಿಕಾರಿಗಳು ದಾಳಿ ನಡೆಸುವಾಗ ಸ್ಥಳೀಯ ಪೊಲೀಸರನ್ನು ಬಳಕೆ ಮಾಡಿಕೊಳ್ಳುತ್ತಿದ್ದರು.ಆದರೆ ಮಾಹಿತಿ ಸೋರಿಕೆಯಾಗುವ ಅನುಮಾನದ ಹಿನ್ನೆಲೆಯಲ್ಲಿ ಸಿಆರ್‍ಪಿಎಫ್ ಯೋಧರನ್ನು ಬಳಕೆ ಮಾಡಿಕೊಳ್ಳಲಾಗಿತ್ತು.

ಈ ಹಿಂದೆ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಅವರ ಸಂಬಂಧಿಕರ ಮನೆ, ಕಚೇರಿ ಮತ್ತಿತರ ಕಡೆ ದಾಳಿ ನಡೆದಾಗ ಸಿಆರ್‍ಪಿಎಫ್ ಯೋಧರನ್ನೇ ಭದ್ರತೆಗೆ ನಿಯೋಜನೆ ಮಾಡಲಾಗಿತ್ತು.

ಇಂದು ಮಂಡ್ಯ, ಮೈಸೂರು, ಹಾಸನ, ಕನಕಪುರ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ದಾಳಿ ನಡೆಸುವಾಗ ಬಹುತೇಕ ಎಲ್ಲ ಕಡೆ ಸಿಆರ್‍ಪಿಎಫ್ ಯೋಧರ ಭದ್ರತೆಯಲ್ಲೇ ದಾಳಿ ನಡೆಸಲಾಗಿದೆ.

ಈ ಮೊದಲು ಐಟಿ, ಇಡಿ , ಸಿಬಿಐ ಸೇರಿದಂತೆ ಕೇಂದ್ರದ ತನಿಖಾ ಸಂಸ್ಥೆಗಳು ಯಾವುದೇ ಜನಪ್ರತಿನಿಧಿ, ಸಚಿವರು, ಶಾಸಕರು, ಅಧಿಕಾರಿಗಳು ಸೇರಿದಂತೆ ದಾಳಿ ಮಾಡುವಾಗ ಸ್ಥಳೀಯ ಪೊಲೀಸರ ನೆರವು ಕೋರಲಾಗುತ್ತಿತ್ತು.ಆದರೆ ಕೆಲವು ಸಂದರ್ಭಗಳಲ್ಲಿ ದಾಳಿಗೂ ಮುನ್ನವೇ ಮಾಹಿತಿ ಸೋರಿಕೆಯಾಗುತ್ತಿದ್ದರಿಂದ ಈ ಬಾರಿ ಹೀಗಾಗದಂತೆ ಎಚ್ಚರ ವಹಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ