ಬೆಂಗಳೂರು, ಮಾ.28-ಕರ್ನಾಟಕ ಸೇರಿದಂತೆ ದೇಶದ 14 ರಾಜ್ಯಗಳಲ್ಲಿನ 115 ಕ್ಷೇತ್ರಗಳಿಗೆ ಮೂರನೆ ಹಂತದ ಲೋಕಸಭೆ ಚುನಾವಣೆಗೆ ಇಂದು ಅಧಿಸೂಚನೆ ಹೊರಡಿಸಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ರಾಜ್ಯದ 2ನೇ ಹಂತದಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬೀದರ್, ಬಳ್ಳಾರಿ, ಕಲಬುರಗಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ರಾಯಚೂರು, ಕೊಪ್ಪಳ, ವಿಜಯಪುರ, ಹಾವೇರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಇಂದು ಅಧಿಸೂಚನೆ ಹೊರಡಿಸಲಾಗಿದೆ.
ಅದೇ ರೀತಿ ಅಸ್ಸಾಂ, ಬಿಹಾರ್, ಛತ್ತೀಸ್ಗಡ, ಗುಜರಾತ್, ಜಮ್ಮು-ಕಾಶ್ಮೀರ, ಮಹಾರಾಷ್ಟ್ರ, ಕೇರಳ, ಒಡಿಸ್ಸಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ದಾದ್ರ ಮತ್ತು ನಗರ ಹಾವೇಲಿ, ದಮನ್ ಮತ್ತು ಡಿಯು ರಾಜ್ಯಗಳಲ್ಲಿ ಮೂರನೇ ಹಂತದ ಚುನಾವಣೆಗೆ ಅಧಿಸೂಚನೆ ಹೊರಬಿದ್ದಿದೆ.
ಕರ್ನಾಟಕ ಸೇರಿದಂತೆ 14 ರಾಜ್ಯಗಳ 115 ಲೋಕಸಭಾ ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಏ.4 ರವರೆಗೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದಾಗಿದೆ.
ಏ.5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.8ರವರೆಗೂ ನಾಮಪತ್ರಗಳನ್ನು ವಾಪಸ್ ಪಡೆಯಲು ಕಾಲಾವಕಾಶವನ್ನು ಚುನಾವಣಾ ಆಯೋಗ ನೀಡಿದೆ.
ಏ.23 ರಂದು ಮತದಾನ ನಡೆಯಲಿದೆ. ಮತ ಎಣಿಕೆ ಮೇ 23 ರಂದು ನಡೆಯಲಿದ್ದು, ಅಂದೇ ಫಲಿತಾಂಶವೂ ಕೂಡ ಹೊರಬೀಳಲಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಂಸದ ಸುರೇಶ್ ಅಂಗಡಿ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಕೆಗೂ ಮುನ್ನ ನಗರದಲ್ಲಿ ರೋಡ್ ಶೋ ನಡೆಸಿದರು.ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ, ಶಾಸಕ ಅನಿಲ್ ಬೆನಕೆ ಸೇರಿದಂತೆ ಪಕ್ಷದ ಸ್ಥಳೀಯ ಮುಖಂಡರು ಸಾಥ್ ನೀಡಿದ್ದರು.
ಇದೇ ರೀತಿ ಎರಡನೇ ಹಂತದಲ್ಲಿ ಮತದಾನ ನಡೆಯುವ ವಿವಿಧ ಕ್ಷೇತ್ರಗಳಲ್ಲಿ ಪಕ್ಷೇತರರು ಸೇರಿದಂತೆ ಕೆಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಚುನಾವಣಾ ಕಾವು ತಾರಕಕ್ಕೇರತೊಡಗಿದೆ. ರಾಜಕೀಯ ಪಕ್ಷಗಳು, ಸ್ವತಂತ್ರ ಅಭ್ಯರ್ಥಿಗಳು ಬಿರುಸಿನ ಪ್ರಚಾರವನ್ನು ಆರಂಭಿಸಿದ್ದು, ರಾಜ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ಅಬ್ಬರ ಜೋರಾಗಿದೆ. ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರತೊಡಗಿದೆ.
ಚುನಾವಣಾ ಅಕ್ರಮಗಳನ್ನು ತಡೆಯಲು ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ರಾಜ್ಯದ 28 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲೂ ಚೆಕ್ಪೋಸ್ಟ್ಗಳನ್ನು ತೆರೆದಿದೆ.
ಅಭ್ಯರ್ಥಿಗಳು ಮಾಡುವ ವೆಚ್ಚದ ಮೇಲೆ ನಿಗಾ ಇಡಲಾಗಿದೆ. ಮತದಾರರನ್ನು ಸೆಳೆಯಲು ನೀಡುವಂತಹ ಉಡುಗೊರೆ, ಹಣ, ಮದ್ಯ, ಮೊದಲಾದ ಆಮಿಷಗಳಿಗೆ ಕಡಿವಾಣ ಹಾಕಲು ಆಯೋಗ ಹೆಚ್ಚಿನ ಮುತುವರ್ಜಿ ವಹಿಸಿದೆ.
ಅದೇ ರೀತಿ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಮತದಾರರ ಮನ ಗೆಲ್ಲಲು ನಾನಾ ರೀತಿಯ ಕಸರತ್ತು, ಚುನಾವಣಾ ತಂತ್ರಗಳನ್ನು ರೂಪಿಸಿ ತಮ್ಮದೇ ಆದ ರೀತಿಯಲ್ಲಿ ಪ್ರಚಾರವನ್ನು ಕೈಗೊಳ್ಳುತ್ತಿದ್ದಾರೆ.