![sanjeevkumar](http://kannada.vartamitra.com/wp-content/uploads/2018/10/sanjeevkumar-678x353.jpg)
ಬೆಂಗಳೂರು, ಮಾ.29-ಭಾರತ ಚುನಾವಣಾ ಆಯೋಗದ ಆಶಯದಂತೆ ರಾಜ್ಯ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ರೇಖೆಗಳಲ್ಲಿ ಚುನಾವಣೆ-2019 ಪ್ರದರ್ಶನ ಹಾಗೂ ಮತದಾರರ ಜಾಗೃತಿ ಅಭಿಯಾನಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾ.31 ರಂದು ನಗರದ ಲಾಲ್ಬಾಗ್ ಸಸ್ಯೋದ್ಯಾನದ ಗಾಜಿನ ಮನೆಯಲ್ಲಿ ಬೆಳಿಗ್ಗೆ 8 ಗಂಟೆಗೆ ಚಾಲನೆ ನೀಡಲಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಚುನಾವಣಾ ಪಾಲ್ಗೊಳ್ಳುವಿಕೆ ಕಾರ್ಯಕ್ರಮಕ್ಕೆ ಪೂರಕವಾಗಿ ಆಯೋಜಿಸಿರುವ ಈ ವಿನೂತನ ಕಾರ್ಯಕ್ರಮದಲ್ಲಿ ರಾಜ್ಯ ಚುನಾವಣಾಧಿಕಾರಿ ಮುಖ್ಯ ಸಂಜೀವ್ಕುಮಾರ್, ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಡಾ ಅಜಯ ನಾಗಭೂಷಣ, ಡಾ ಕೆ. ಜಿ. ಜಗದೀಶ್ ಮತ್ತು ಕೆ.ಎನ್.ರಮೇಶ್, ಜಂಟಿ ಮುಖ್ಯ ಚುನಾವಣಾಧಿಕಾರಿ ಎ. ವಿ. ಸೂರ್ಯಸೇನ್, ರಾಜ್ಯ ತೋಟಗಾರಿಕಾ ಇಲಾಖೆಯ ನಿರ್ದೇಶಕ ಡಾ ಎಂ ವೆಂಕಟೇಶ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್. ಭೃಂಗೀಶ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.