ನವದೆಹಲಿ: ಎ – ಸ್ಯಾಟ್ ಯಶಸ್ಸಿನ ಬಗ್ಗೆ ದೇಶಕ್ಕೆ ಮಾಹಿತಿ ನೀಡಲು ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾಡಿದ್ದ ಭಾಷಣ ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಮೋದಿಯವರಿಗೆ ಕ್ಲೀನ್ ಚಿಟ್ ನೀಡಿದೆ.
ಮಿಷನ್ ಶಕ್ತಿ ಯಶಸ್ಸಿನ ಬಗ್ಗೆ ಪ್ರಧಾನಿ ಮೋದಿ ಮಾರ್ಚ್ 27 ರಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದು ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಆಯೋಗ ಹೇಳಿದೆ.
ಎ – ಸ್ಯಾಟ್ ಯಶಸ್ಸಿನ ಬಗ್ಗೆ ದೇಶಕ್ಕೆ ಮಾಹಿತಿ ನೀಡಲು ಪ್ರಧಾನಿ ಮೋದಿ ಉಪಗ್ರಹವೊಂದನ್ನು ಹೊಡೆದುಹಾಕಲಾಗಿದ್ದು, ಈ ಮೂಲಕ ಭಾರತ ಬಾಹ್ಯಾಕಾಶದ ಸೂಪರ್ಪವರ್ಗಳ ಸಾಲಿಗೆ ಸೇರ್ಪಡೆಯಾಗಿದೆ ಎಂದು ಘೋಷಿಸಿದ್ದರು. ಇದು ಅಪರೂಪದ ಸಾಧನೆ ಎಂದು ಸಹ ವಿಜ್ಞಾನಿಗಳನ್ನು ಶ್ಲಾಘಿಸಿದ್ದರು.
ಆದರೆ ವಿಪಕ್ಷಗಳು ಪ್ರಧಾನಿ ಮೋದಿಯ ಭಾಷಣ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ಈ ಸಂಬಂಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು. ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಿದ ಚುನಾವಣಾ ಆಯೋಗ, ಮೋದಿ ಭಾಷಣದಲ್ಲಿ ನೀತಿ ಸಂಹಿತೆ ಉಲ್ಲಂಘನೆಯ ಅಂಶಗಳಿಲ್ಲ ಎಂದು ಸ್ಪಷ್ಟಪಡಿಸಿದೆ.
EC gives clean chit to PM Narendra Modi’s address to the nation on Mission Shakti