ಬೆಂಗಳೂರು ಗ್ರಾಮಾಂತರ, ಮಾ.29-ಖಾಸಗಿ ಬಸ್ಸಿನಲ್ಲಿ ಗಾಂಜಾವನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಚುನಾವಣಾ ನಿಯೋಜಿತ ಅಧಿಕಾರಿಗಳು ಬಂಧಿಸಿದ್ದಾರೆ.
ನಿನ್ನೆ ಮುಂಜಾನೆ 4 ಗಂಟೆ ಸಮಯದಲ್ಲಿ ವ್ಯಕ್ತಿಯೊಬ್ಬ ಗಾಂಜಾವನ್ನು ಖಾಸಗಿ ಬಸ್ನಲ್ಲಿ ಸಾಗಿಸುತ್ತಿದ್ದಾಗ ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಚೆಕ್ಪೋಸ್ಟ್ ಬಳಿ ಚುನಾವಣಾ ನಿಯೋಜಿತ ಅಧಿಕಾರಿಗಳು ಬಸ್ಸನ್ನು ತಪಾಸಣೆ ನಡೆಸಿ ಆತನನ್ನು ಬಂಧಿಸಿದ್ದಾರೆ. ಬಂಧಿತನಿಂದ 1.3 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕರೀಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.