ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಚುನಾವಣಾ ಅಧಿಕಾರಿಗಳು

ಬೆಂಗಳೂರು ಗ್ರಾಮಾಂತರ, ಮಾ.29-ಖಾಸಗಿ ಬಸ್ಸಿನಲ್ಲಿ ಗಾಂಜಾವನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಚುನಾವಣಾ ನಿಯೋಜಿತ ಅಧಿಕಾರಿಗಳು ಬಂಧಿಸಿದ್ದಾರೆ.

ನಿನ್ನೆ ಮುಂಜಾನೆ 4 ಗಂಟೆ ಸಮಯದಲ್ಲಿ ವ್ಯಕ್ತಿಯೊಬ್ಬ ಗಾಂಜಾವನ್ನು ಖಾಸಗಿ ಬಸ್‍ನಲ್ಲಿ ಸಾಗಿಸುತ್ತಿದ್ದಾಗ ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಚೆಕ್‍ಪೋಸ್ಟ್ ಬಳಿ ಚುನಾವಣಾ ನಿಯೋಜಿತ ಅಧಿಕಾರಿಗಳು ಬಸ್ಸನ್ನು ತಪಾಸಣೆ ನಡೆಸಿ ಆತನನ್ನು ಬಂಧಿಸಿದ್ದಾರೆ. ಬಂಧಿತನಿಂದ 1.3 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕರೀಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ