ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕದ ಬಾಕಿ ಉಳಿದ ಮೂರು ಕ್ಷೇತ್ರ ಸೇರಿ ಒಟ್ಟು 11 ಕ್ಷೇತ್ರಗಳ ಅಭ್ಯರ್ಥಿಗಳನ್ನೊಳಗೊಂಡ 12 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.
ಕರ್ನಾಟಕದಲ್ಲಿ ಬಾಕಿವುಳಿದಿದ್ದ 3 ಕ್ಷೇತ್ರಗಳಾದ ರಾಯಚೂರು- ಕ್ಷೇತ್ರಕ್ಕೆ ರಾಜಾ ಅಮರೇಶ್ ನಾಯಕ್, ಕೊಪ್ಪಳ ಕ್ಷೇತ್ರಕ್ಕೆ ಸಂಗಣ್ಣ ಕರಡಿ ಮತ್ತು ಚಿಕ್ಕೋಡಿ ಕ್ಷೇತ್ರಕ್ಕೆ ಅಣ್ಣಾ ಸಾಹೇಬ್ ಜೊಲ್ಲೆ ಅವರ ಹೆಸರು ಅಂತಿಮಗೊಂಡಿದೆ.
ಇದೇ ವೇಳೆ ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ರಾಜಸ್ಥಾನಗಳ ಕ್ಷೇತ್ರಗಳಿಗೂ ಅಭ್ಯರ್ಥಿ ಬಿಡುಗಡೆಮಾಡಲಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಲಡಾಖ್ನಲ್ಲಿ ಜಾಮ್ಯಾಂಗ್ ತ್ಸೇರಿಂಗ್ ನಂಗ್ಯಾಲ್ ಸ್ಪರ್ಧಿಸಲಿದ್ದಾರೆ.
lok sabha election; bjp releases 12 list of candidates