ನೀತಿ ಸಂಹಿತೆ ಜಾರಿ ಹಿನ್ನಲೆ-ಖಾಯಂ ವರ್ಗಾವಣೆ ಬದಲಿಗೆ ಪ್ರಭಾರ ಜವಬ್ದಾರಿ

ಬೆಂಗಳೂರು, ಮಾ.30-ಐಎಎಸ್ ಅಧಿಕಾರಿಗಳಿಂದ ತೆರವಾಗಿರುವ ವಿವಿಧ ಹುದ್ದೆಗಳಿಗೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಖಾಯಂ ವರ್ಗಾವಣೆ ಮಾಡುವ ಬದಲಿಗೆ ಪ್ರಭಾರ ಜವಾಬ್ದಾರಿಗಳನ್ನು ವಹಿಸಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ.

ಪಂಚಾಯತ್‍ರಾಜ್ ಇಲಾಖೆಯಲ್ಲಿ ಪ್ರಧಾನಕಾರ್ಯದರ್ಶಿ ಹುದ್ದೆಯಲ್ಲಿದ್ದ ಎಂ.ಕೆ.ಅಯ್ಯಪ್ಪ ಅವರು ಸ್ವಯಂ ನಿವೃತ್ತಿ ತೆಗೆದುಕೊಂಡಿದ್ದರಿಂದ ಹುದ್ದೆ ತೆರವಾಗಿದ್ದು, ಅದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತಿಕ್ ಅವರನ್ನು ಸಮವರ್ತಿತ ಪ್ರಭಾರ ಜವಾಬ್ದಾರಿಗೆ ನಿಯೋಜಿಸಲಾಗಿದೆ.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸರ್ಕಾರದ ಕಾರ್ಯದರ್ಶಿಯಾಗಿದ್ದ ಎಂ.ವಿ.ಸಾವಿತ್ರಿ ಅವರು ವಯೋನಿವೃತ್ತಿಯಾಗಿದ್ದು, ವಸತಿ ಇಲಾಖೆ ಕಾರ್ಯದರ್ಶಿ ಡಾ.ಜೆ.ರವಿಶಂಕರ್ ಅವರನ್ನು ರೇಷ್ಮೆ ಅಭಿವೃದ್ಧಿ ಆಯುಕ್ತರಾಗಿದ್ದ ಕೆ.ಎಸ್.ಮಂಜುನಾಥ್ ಅವರ ನಿವೃತ್ತಿಯಿಂದ ತೆರವಾಗಿದ್ದ ಹುದ್ದೆಗೆ ರೇಷ್ಮೆ ಉದ್ಯಮಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾದ ನೀಲ ಮಂಜುನಾಥ್ ಅವರನ್ನು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹೇಮಾಜಿ ನಾಯಕ್ ಅವರ ನಿವೃತ್ತಿಯಿಂದ ತೆರವಾದ ಹುದ್ದೆಗೆ ಇಲಾಖೆ ಆಯುಕ್ತರಾದ ಟಿ.ಎಚ್.ಎಂ.ಕುಮಾರ್ ಅವರನ್ನು ಪ್ರಭಾರ ಅಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ