ಕಾಂಗ್ರೇಸ್-ಜೆಡಿಎಸ್‍ನಿಂದ ಜಂಟಿ ಚುನಾವಣಾ ಪ್ರಚಾರ-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಬೆಂಗಳೂರು, ಮಾ.30- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಜಂಟಿಯಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಇಂದಿಲ್ಲಿ ತಿಳಿಸಿದರು.

ಚುನಾವಣಾ ಪ್ರಚಾರ ಹಾಗೂ ಮತ್ತಿತರ ವಿಚಾರ ಸಂಬಂಧ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ನಾಳೆ ರಾಜ್ಯಕ್ಕೆ ಆಗಮಿಸಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಉಭಯ ಪಕ್ಷಗಳು ಮೈತ್ರಿ ಪರ್ವದ ಪರಿವರ್ತನಾ ಸಮಾವೇಶ ನಡೆಯಲಿದೆ.

ಅಲ್ಲಿಂದ ಜಂಟಿ ಪುನಾರಾಂದೋಲನಕ್ಕೆ ಅಧಿಕೃತ ಚಾಲನೆ ದೊರೆಯಿಲಿದೆ ಎಂದರು.

ಸಮಾವೇಶದಲ್ಲಿ ಜಂಟಿ ಪ್ರಚಾರದ ರೂಪುರೇಷೆಗಳ ಬಗ್ಗೆ ತೀರ್ಮಾನಿಸಲಾಗುವುದು ತಾವು ಸಹ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ