ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿ ಮಾದರಿಯಲ್ಲೇ ಮತ್ತೊಂದು ದಾಳಿ ನಡೆಸಲು ಉಗ್ರರು ಯತ್ನ ನಡೆಸಿದ್ದರೆ ಎಂಬ ಅನುಮಾನ ಆರಂಭವಾಗಿದೆ. ಇದಕ್ಕೆ ಇಂಬುನೀಡುವಂತೆ ವ್ಯಕ್ತಿಯೊಬ್ಬ ಸಿಆರ್ ಎಫ್ ವಾಹನಕ್ಕೆ ಕಾರನ್ನು ಡಿಕ್ಕಿ ಹೊಡೆಸಿರುವ ಘಟನೆ ಜಮ್ಮು ಹೆದ್ದಾರಿಯಲ್ಲಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿ ಬನಿಹಾಲ್ ನಲ್ಲಿ ವ್ಯಕ್ತಿ ಕಾರನ್ನು ಸಿಆರ್ಪಿಎಫ್ ವಾಹನಕ್ಕೆ ಡಿಕ್ಕಿ ಹೊಡೆಸಿದ್ದಾನೆ. ಪರಿಣಾಮ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಾರು ಸಂಪೂರ್ಣ ಧ್ವಂಸಗೊಂಡಿದೆ.
ಇನ್ನು ಸಿಆರ್ ಪಿಎಫ್ ವಾಹನದಲ್ಲಿ ಸೈನಿಕರು ಇದ್ದರೆ ಎಂಬುದು ತಿಳಿದುಬಂದಿಲ್ಲ.
ಮೇಲ್ನೋಟಕ್ಕೆ ಇದು ಭಯತ್ಪೋದಾನಾ ದಾಳಿಯ ರೀತಿಯಲ್ಲಿ ಕಾಣಿಸುತ್ತಿಲ್ಲ. ಕಾರಿನಲ್ಲಿದ್ದ ಸಿಲಿಂಡರ್ ಸ್ಫೋಟದಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಫೆ.14ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಪಾಕ್ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಸಿಆರ್ಪಿಎಫ್ನ 40 ಯೋಧರು ಹುತಾತ್ಮರಾಗಿದ್ದರು.
CRPF convoy hit by a car in Jammu highway. No casualties reported