ಮುಂಬೈ ವಿರುದ್ಧ ಪಂಜಾಬ್‍ಗೆ ಭರ್ಜರಿ ಜಯ

ಚಂಡಿಗಢ: ಕನ್ನಡಿಗರಾದ ಕೆ.ಎಲ್. ರಾಹುಲ್ ಅವರ ಅರ್ಧ ಶತಕ ಮತ್ತು ಮಯಾಂಕ್ ಅಗರ್‍ವಾಲ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಮುಂಬೈ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್‍ಗೆ ಇಳಿಸಲ್ಪಟ್ಟ ಮುಂಬೈ ಇಂಡಿಯನ್ಸ್ ತಂಡ ತಂಡದ ಆರಂಭಿಕ ಬ್ಯಾಟ್ಸ್‍ಮನ್ ಕ್ವಿಂಟಾನ್ ಡಿ’ಕಾಕ್(60) ಅವರ ಅರ್ಧ ಶತಕದ ನೆರವಿನಿಂದ ನಿಗದಿತ ಓವರ್‍ನಲ್ಲಿ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ತಂಡದ ಪರ ನಾಯಕ ರೋಹಿತ್ ಶರ್ಮಾ(32), ಹಾರ್ದಿಕ್ ಪಾಂಡ್ಯ 31 ರನ್ ಗಳಿಸಿದ್ದು ಹೈಯೆಸ್ಟ್ ಸ್ಕೋರ್ ಆಗಿದೆ.

177 ರನ್‍ಗಳ ಗುರಿ ಬೆನ್ನತ್ತಿದ ಪಂಜಾಬ್ ತಂಡಕ್ಕೆ ಆರಂಭಿಕ ಬ್ಯಾಟ್ಸ್‍ಮನ್‍ಗಳಾದ ಕೆ.ಎಲ್. ರಾಹುಲ್ ಮತ್ತು ಕ್ರಿಸ್ ಗೇಲ್ ಮೊದಲ ವಿಕೆಟ್‍ಗೆ 53 ರನ್ ಸೇರಿಸಿ ಒಳ್ಳೆಯ ಆರಂಭ ಕೊಟ್ಟರು. ರಾಹುಲ್ 57 ಎಸೆತದಲ್ಲಿ 6 ಬೌಂಡರಿ 1 ಸಿಕ್ಸರ್ ಬಾರಿಸಿದ್ರು. ಗೇಲ್ 40 ರನ್‍ಗಳಿಸಿ ಪೆವಿಲಿಯನ್ ಸೇರಿದ ನಂತರ ಬಂದ ಮಯಾಂಕ್ ಅಗರ್‍ವಾಲ್ 43 ನಂತರ ಬಂದ ಡೇವಿಡ್ ಮಿಲ್ಲರ್ ಅಜೇಯ 15 ರನ್‍ಗಳಿಸಿದರು. ರಾಹುಲ್ 8 ಎಸೆತಗಳು ಬಾಕಿ ಇರುವಾಗಲೇ ರಾಹುಲ್ ಗೆಲುವಿನ ದಡ ಸೇರಿಸಿದ್ರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ