ಅಹಮದಾಬಾದ್: ಪಾಕಿಸ್ತಾನದ ವಿರುದ್ಧ ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿ ಕ್ರೆಡಿಟ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಬಾರದೇಕೆ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಪ್ರಶ್ನಿಸಿದ್ದಾರೆ.
ಗಾಂಧಿ ನಗರದಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ವಿಭಜಿಸಿದ ಕ್ರೆಡಿಟ್ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಲ್ಲುವುದಾದರೆ, ಬಾಲಾಕೋಟ್ ವಾಯುದಾಳಿಯ ಕ್ರೆಡಿಟ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಬಾರದೇಕೆ ಎಂದುರು.
ಭಾರತೀಯ ಸೈನಿಕರ ಸಾಮರ್ಥ್ಯದಿಂದ ಪಾಕಿಸ್ತಾನ ವಿಂಗಡನೆಯಾಗಿ ಬಾಂಗ್ಲಾದೇಶ್ ಜನ್ಮ ತಾಳಿತು. ಭಾರತ-ಪಾಕಿಸ್ತಾನ ನಡುವೆ ನಡೆದ ಯುದ್ಧದ ಬಳಿಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಂಸತ್ತಿನಲ್ಲಿ ಇಂದಿರಾ ಗಾಂಧಿ ಅವರನ್ನು ಪ್ರಶಂಸಿದ್ದರು. ಜತೆಗೆ ಇಂದಿರಾ ಗಾಂಧಿ ಅವರು ಇಡೀ ದೇಶದ ಪ್ರಶಂಸೆಗೆ ಪಾತ್ರರಾಗಿದ್ದರು ಎಂದರು.
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಜೈಷೆ ಮೊಹಮ್ಮದ್ ಭಯೋತ್ಪಾದಕರ ಆತ್ಮಾಹುತಿ ದಾಳಿಯಲ್ಲಿ 40ಕ್ಕೂ ಅಧಿಕ ಸಿಆರ್ಪಿಎಫ್ ಯೋಧರು ಹುತಾತ್ಮರಾದ ಬಳಿಕ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಸೇನೆಗೆ ಮುಕ್ತ ಅವಕಾಶ ನೀಡಿದ್ದರು. ಬಳಿಕ ಭಾರತೀಯ ಸೇನೆ ವೈಮಾನಿಕ ದಾಳಿ ನಡೆಸಿ ಬಾಲಾಕೋಟ್ ನಲ್ಲಿನ ಉಗ್ರರ ನೆಲೆಯನ್ನು ಧ್ವಂಸಗೊಳಿಸಿತು ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
Why shouldn’t PM Narendra Modi get credit for Balakot strike, asks Rajnath Singh