ಹುಬ್ಬಳ್ಳಿ: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಲಿದೆ. ಮೈತ್ರಿ ಸರ್ಕಾರದ ನಾಯಕರ ಮಧ್ಯೆ ಪರಸ್ಪರ ಅಪನಂಬಿಕೆಯಿದೆ. ಅವರವರೇ ಕಚ್ಚಾಡಿಕೊಂಡು ಸರ್ಕಾರವನ್ನು ಉರುಳಿಸುತ್ತಾರೆ ಎಂದು ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಹಿಂದುಳಿದ ವರ್ಗಗಳ ಸಮಾಜಕ್ಕೆ ಈ ಹಿಂದೆ ಬಿಜೆಪಿ ಸರ್ಕಾರ ಸಾಕಷ್ಟು ಅನುಕೂಲ ಮಾಡಿದೆ ಆದ್ರೆ ಹಿಂದುಳಿದ ವರ್ಗಗಳ ಮುಖಂಡ ಎಂದು ಹೇಳುವ ಮಾಜಿ ಸಿಎಂ ಸಿದ್ಧರಾಮಯ್ಯ ಏನು ಮಾಡಿದ್ದಾರೆ ಎಂದು ಪ್ರೆಶ್ನಿಸಿದರು.
ದೇಶದಲ್ಲಿ ಕೇವಲ ಜಾತಿ ರಾಜಕಾರಣ ಹೆಚ್ಚಾಗಿದೆ ಹಿಂದುಳಿದ ವರ್ಗದವರು ಎಂದು ಹೇಳಿಕೊಳ್ಳುವ ನಾಯಕರು ಹಿಂದಜಳಿದ ಸಮಾಜದ ಅಭಿವೃದ್ದಿಗೆ ಏನೂ ಸಹಾಯ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಲೋಕಸಭಾ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಮೈತ್ರಿ ಸರ್ಕಾರ ಕಚ್ಚಾಡಿಕೊಂಡು ನೆಲಕಚ್ಚಲಿದೆ ಎಂದ ಈಶ್ವರಪ್ಪ, ದೇವೇಗೌಡರಿಗೆ ತುಮಕೂರಿನಲ್ಲಿ ಗೆಲ್ಲುತ್ತೇನೋ ಇಲ್ಲವೋ ಎಂಬ ಭಯವಿದೆ. ಮೈಸೂರಿನಲ್ಲಿ ಸಿದ್ಧರಾಮಯ್ಯಗೆ ಸೋಲಿನ ಭಯ ಕಾಡುತ್ತಿದೆ. ಇಬ್ಬರೂ ಮೈತ್ರಿ ಸರ್ಕಾರದವರೇ ಆದರೂ ಅವರಿಗೆ ಸೋಲಿನ ಭಯ ಕಾಡುತ್ತಿದೆ ಎಂದರು.