ಮಂಡ್ಯ ಚುನಾವಣಾಧಿಕಾರಿ ವರ್ಗಾವಣೆಗೆ ಬಿಎಸ್ ಪಿ ಅಭ್ಯರ್ಥಿಯಿಂದಲೂ ಒತ್ತಾಯ

ಮಂದ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಪಕ್ಷೇತ್ರ ಅಭ್ಯರ್ಥಿ ಸುಮಲತಾ ಜಿಲ್ಲಾ ಚುನಾವಣಾಧಿಕಾರಿ ವರ್ಗಾವಣೆಗೆ ಆಗ್ರಹಿಸಿದ ಬೆನ್ನಲ್ಲೇ ಈಗ BSP ಅಭ್ಯರ್ಥಿ ನಂಜುಂಡಸ್ವಾಮಿ ಕೂಡ ಚುನಾವಣಾಧಿಕಾರಿ ವರ್ಗಾವಣೆಗೆ ಒತ್ತಾಯಿಸಿ ದೂರು ನೀಡಿದ್ದಾರೆ.

ಕೇಂದ್ರ ಚುನಾವಣಾ ಆಯುಕ್ತರು, ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನಂಜುಂಡ ಸ್ವಾಮಿ ದೂರು ನೀಡಿದ್ದಾರೆ. ಅಭ್ಯರ್ಥಿಯ ಕ್ರಮ ಸಂಖ್ಯೆ ಹಂಚಿಕೆಯಲ್ಲಿ ಅನ್ಯಾಯ, ಚುನಾವಣಾಧಿಕಾರಿಗಳಿಂದ ಏಕಪಕ್ಷೀಯ ನಿರ್ಧಾರದ ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದೇ ವೇಳೆ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ಜತೆಗೆ ಮಂಡ್ಯ ಎಸ್ಪಿ ವರ್ಗಾವಣೆಗೂ ಆಗ್ರಹ ಕೇಳಿಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ