ಚುನಾವಣಾ ಸಂಬಂಧ ಗೊಂದಲ, ಆಕ್ಷೇಪ-ಚುನಾವಣಾ ಆಯೋಗಕ್ಕೆ ದೂರು ನೀಡಬಹುದು-ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾ.31- ಚುನಾವಣೆಗೆ ಸಂಬಂಧಿಸಿದಂತೆ ಏನೇ ಗೊಂದಲಗಳು ಆಕ್ಷೇಪಗಳಿದ್ದರೂ ಚುನಾವಣಾ ಆಯೋಗಕ್ಕೆ ದೂರು ನೀಡಬಹುದಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಾಮಪತ್ರದ ಗೊಂದಲದ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ದೂರ ನೀಡಬಹುದಾಗಿದೆ.

ಚುನಾವಣೆಗೆ ಸಂಬಂಧಿಸಿದ ಗೊಂದಲಗಳು ಏನೇ ಇದ್ದರು ಆಯೋಗವೇ ನೋಡಿಕೊಳ್ಳುತ್ತದೆ.ಚುನಾವಣಾಧಿಕಾರಿಗಳು, ವೀಕ್ಷಕರನ್ನು ಆಯೋಗವೇ ನೇಮಕ ಮಾಡುತ್ತದೆ. ಹೀಗಾಗಿ ಯಾವುದೇ ಪಕ್ಷದ ಪರ ಅವರು ಕೆಲಸ ಮಾಡುವುದಿಲ್ಲ ಎಂದು ಹೇಳಿದರು.

ನಾಳೆಯಿಂದ ಚುನಾವಣಾ ಪ್ರಚಾರ ಆರಂಭವಾಗಲಿದ್ದು ಇಂದು ಸಂಜೆ ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಗುತ್ತದೆ.

ಚುನಾವಣಾ ಪ್ರಚಾರಕ್ಕೆ ದೇವೇಗೌಡರಿಗೆ ಆಹ್ವಾನ ನೀಡಲಾಗಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ