ರಾಹುಲ್ ಗಾಂಧಿ ಅಮೇಥಿ ಹಾಗೂ ವಯನಾಡ್ ಎರಡೂ ಕ್ಷೇತ್ರಗಳಲ್ಲಿ ಸೋಲಲಿದ್ದಾರೆ: ಸಂಸದ ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ಬಾರಿ ಅಮೇಥಿ ಹಾಗೂ ವಯನಾಡ್ ಎರಡೂ ಕ್ಷೇತ್ರಗಳಲ್ಲಿ ಸೋಲನುಭವಿಸಲಿದ್ದಾರೆ ಎಂದು ಸಂಸದ ಪ್ರಹ್ಲಾದ್ ಜೋಷಿ ಭವಿಷ್ಯ ನುಡಿದಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಜೋಷಿ,ರಾಹುಲ್‌ ಗಾಂಧಿ ಈ ಬಾರಿ ಕೇರಳದ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಾರಂತೆ. ಎರಡೂ ಕ್ಷೇತ್ರಗಳಲ್ಲಿ ಸೋಲುತ್ತಾರೆ ಎಂದರು.

ಹಿಂದುಳಿದ ವರ್ಗಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಈ ಚುಮಾವಣೆಯಲ್ಲಿ ಸೋತು ನಿರುದ್ಯೋಗಿಯಾಗುತ್ತಾರೆ. ಇದೇ ವೇಳೆ ಧಾರವಾಡಲ್ಲಿ ನನ್ನ ವಿರುದ್ದ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿ ಸಿಗುತ್ತಿಲ್ಲ. 125 ವರ್ಷದ ಪಕ್ಷಕ್ಕೆ ಅಭ್ಯರ್ಥಿ ಸಿಗುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಜೆಡಿಎಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಪ್ರಲ್ಹಾದ್ ಜೋಶಿ. ನರೇಂದ್ರ ಮೋದಿಯವರಿಗೆ ಇಡೀ ದೇಶವೇ ಕುಟುಂಬ. ಆದ್ರೆ ದೇವೇಗೌಡ್ರಿಗೆ ಅವರ ಕುಟುಂಬವೇ ದೇಶ.

ಅವರ‌‌‌ ಮೊಮ್ಮನಿಗೆ ಸ್ಥಾನ ಬಿಟ್ಟುಕೊಟ್ಟಿದ್ದಕ್ಕೆ ಕಣ್ಣೀರಿಟ್ಟರು. ಒಂದೇ ದಿನ ತಂದೆ ಮಕ್ಕಳು ನಾಲ್ಕು ಜನ ಕಣ್ಣೀರೀಟ್ಟರು ಎಂದು ಜೆಡಿಎಸ್ ನಾಯಕರನ್ನು ಲೇವಡಿ ಮಾಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ