ವಯನಾಡ್ ನಿಂದ್ ರಾಹುಲ್ ಸ್ಪರ್ಧೆ ಬಿಜೆಪಿ ವಿರುದ್ಧವಲ್ಲ; ಎಡಪಕ್ಷಗಳ ವಿರುದ್ಧವಾಗಿದೆ: ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರಂ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ವಯಾನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದು ಬಿಜೆಪಿ ವಿರುದ್ಧದ ಹೋರಾಟವಲ್ಲ ಬದಲಿಗೆ ಎಡಪಕ್ಷಗಳಿಗೆ ಸವಾಲು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯ್‌ ತಿಳಿಸಿದ್ದಾರೆ.

ರಾಹುಲ್‌ ಗಾಂಧಿಯವರನ್ನು ಸೋಲಿಸುವುದೇ ಸಿಬಿಐ(ಎಂ) ಗುರಿ ಎಂದು ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ರಾಹುಲ್‌ ಗಾಂಧಿಯವರು ಕೇರಳದ ವಯಾನಾಡಿನಿಂದ ಕಣಕ್ಕಿಳಿಯುತ್ತಿದ್ದಾರೆ ಎಂಬುದನ್ನು ಕಾಂಗ್ರೆಸ್ ಘೋಷಿಸಿದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಸಿಎಂ ಪಿಣರಾಯಿ, ರಾಹುಲ್‌ ಗಾಂಧಿಯವರು ಕೇರಳದ 20 ಕ್ಷೇತ್ರಗಳ ಪೈಕಿ ಒಂದರಲ್ಲಿ ಸ್ಪರ್ಧಿಸುತ್ತಿದ್ದಾರೆ. ಇದರಲ್ಲಿ ಅಂತಹ ವಿಶೇಷತೆಗಳು ಏನೂ ಇಲ್ಲ. ನಾವು ಅವರ ವಿರುದ್ಧ ಹೋರಾಡುತ್ತೇವೆ ಎಂದರು.

ಬಿಜೆಪಿ ಸ್ಪರ್ಧಿಸುತ್ತಿರುವ ಕ್ಷೇತ್ರದಿಂದ ಅವರು ಸ್ಪರ್ಧಿಸಬೇಕಾಗಿತ್ತು. ಆದರೆ ಹಾಗೆ ಮಾಡಿಲ್ಲ. ಇದು ಬಿಜೆಪಿ ವಿರುದ್ಧದ ಹೋರಾಟವಲ್ಲ ಎಡಪಕ್ಷಗಳ ವಿರುದ್ಧದ ಹೋರಾಟವಾಗಿದೆ ಎಂದು ಗುಡುಗಿದ್ದಾರೆ.

ಸಿಪಿಐ(ಎಂ)ನ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್‌ ಮಾತನಾಡಿ, ಎಡಪಕ್ಷದ ಅಭ್ಯರ್ಥಿ ವಿರುದ್ಧ ರಾಹುಲ್‌ ಗಾಂಧಿಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರೆ ಕೇರಳದಲ್ಲಿ ಕಾಂಗ್ರೆಸ್‌ ಎಡಪಕ್ಷವನ್ನು ಗುರಿಯಾಗಿಸುತ್ತಿದೆ ಎಂದರ್ಥ. ರಾಹುಲ್‌ ಅವರ ಸ್ಪರ್ಧೆಯನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಮತ್ತು ಈ ಚುನಾವಣೆಯಲ್ಲಿ ವಯಾನಾಡಿನಲ್ಲಿ ರಾಹುಲ್ ಗಾಂಧಿಯವರ ಸೋಲಿಸಲು ಕೆಲಸ ಮಾಡುತ್ತೇವೆ ಎಂದರು.

ಕೇರಳದ 20 ಲೋಕಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ 16 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಈಗಾಗಲೇ 12 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಉಳಿದ ನಾಲ್ಕು ಸ್ಥಾನಗಳಲ್ಲಿ ಮೈತ್ರಿ ಪಕ್ಷಗಳು ಸ್ಪರ್ಧಿಸಲಿದ್ದು, ಎರಡರಲ್ಲಿ ಇಂಡಿಯನ್‌ ಯೂನಿಯನ್‌ ಮುಸ್ಲಿಂ ಲೀಗ್‌ (IUML) ಮತ್ತು ಕೇರಳ ಕಾಂಗ್ರೆಸ್‌ (Mani) ಮತ್ತು ಸೋಶಿಯಲಿಸ್ಟ್‌ ಪಾರ್ಟಿ (RSP) ತಲಾ ಒಂದೊಂದು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ.

Rahul Gandhi’s fight against Left, not BJP: Kerala CM Pinarayi Vijayan ..

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ