
ಮಡಿಕೇರಿ, ಏ.1- ತೆಂಗಿನ ಮರ ಹತ್ತುವಾಗ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ವಿರಾಜ್ಪೇಟೆ ತಾಲೂಕಿನ ಅರ್ವತೊಕ್ಲು ಗ್ರಾಮದಲ್ಲಿ ನಡೆದಿದೆ.
ರಾಮಜನಾಮ್ ಎಂಬುವವರ ತೋಟದಲ್ಲಿ ತೆಂಗಿನ ಮರಕ್ಕೆ ಏಣಿ ಹಾಕಿಕೊಂಡು ಕಾಯಿ ಕೀಳಲು ಮುಂದಾಗಿದ್ದಾಗ ಒಬ್ಬನಿಗೆ ವಿದ್ಯುತ್ ಶಾಕ್ ಹೊಡೆದಿದೆ.ಇವರನ್ನು ರಕ್ಷಿಸಲು ಹೋದಾಗ ಈ ದುರ್ಘಟನೆ ಸಂಭವಿಸಿದೆ.
ಮೃತರು ರವಿ, ಧರ್ಮಜ, ಸತೀಶ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ದಾವಿಸಿದ್ದು, ಸ್ಥಳದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.
ತೋಟದ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಶವಗಳನ್ನು ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.