ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ 2 ಗಂಟೆಗಳ ಅವಧಿಯಲ್ಲಿ 9 ಬಾರಿ ಭೂಕಂಪವಾಗಿದ್ದು, ಜನರು ಆತಂಕಗೊಂಡಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಮುಂಜಾನೆ 5.14ಕ್ಕೆ ರಿಚರ್ ಮಾಪಕದಲ್ಲಿ 4.9 ತೀವ್ರತೆಯ ಮೊದಲ ಭೂಕಂಪ ಸಂಭವಿಸಿದ್ದು, 6.54ರ ವೇಳೆಗೆ 5.2 ತೀವ್ರತೆಯ ಭೂಕಂಪ ಸಂಭವಿಸಿದೆ. ಆದರೆ ಯಾವುದೇ ಪ್ರಾಣಹಾನಿ, ಆಸ್ತಿ ಪಾಸ್ತಿ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
ಮಧ್ಯಮ ತೀವ್ರತೆಯ 9 ಭೂಕಂಪಗಳು ಸೋಮವಾರ ಬೆಳಗ್ಗೆ ಒಂದೇ ದಿನದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರವು ತಿಳಿಸಿದೆ. ಎರಡು ಗಂಟೆಗಳ ಅವಧಿಯಲ್ಲಿ 4.7 ಹಾಗೂ 5.2 ತೀವ್ರತೆಯ ಭೂಕಂಪನಗಳು ಸಂಭವಿಸಿವೆ.