ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ರಾತ್ರಿಯಿಂದ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ. ಈ ಉಗ್ರರು ಲಷ್ಕರ್-ಇ-ತೊಯ್ಬಾಗೆ ಸೇರಿದವರು ಎಂದು ಹೇಳಲಾಗುತ್ತಿದೆ.

ಪುಲ್ವಾಮ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಬಳಿಕ ಭದ್ರತಾಪಡೆ ಭಾನುವಾರ ರಾತ್ರಿ ಶೋಧ ಕಾರ್ಯ ಆರಂಭಿಸಿದರು. ಈ ವೇಳೆ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ಮಳೆ ಗೈದಿದ್ದಾರೆ. ಪ್ರತಿ ದಾಳಿ ನಡೆಸಿದ ಸೇನೆ ನಾಲ್ವರು ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವೇಳೆ ಮೂವರು ಭದ್ರತಾ ಪಡೆ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಇನ್ನೂ ಕೆಲ ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದ್ದು ಸೋಮವಾರ ಬೆಳಿಗ್ಗೆ ಕೂಡ ಎನ್‌ಕೌಂಟರ್‌ ಮುಂದುವರೆದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲ ಪ್ರದೇಶದಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ