
ಕಲಬುರಗಿ, ಏ.1- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪ್ರಚಾರದ ವೇಳೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಗುಲ್ಬರ್ಗಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರನ್ನು ಬಚ್ಚಾ ಎಂದು ಕರೆಯುವ ಮೂಲಕ ಬಿಎಸ್ವೈ ಅವರದ್ದು ಎಂತಹ ಸಂಸ್ಕøತಿ ಎಂಬುದನ್ನು ತೋರುತ್ತದೆ.ಲಗಾಮಿಲ್ಲದೆ ಮಾತನಾಡುವುದು ಅವರ ಘನತೆಗೆ ಒಳಿತಲ್ಲ ಎಂದರು.
ಬಿಎಸ್ವೈಗೆ ನೋವಾಗಿದ್ದರೆ ರಾಹುಲ್ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿ. ಅದನ್ನು ಬಿಟ್ಟು ಮನಬಂದಂತೆ ನಾಲಿಗೆ ಹರಿಬಿಟ್ಟಿರುವುದು ಸರಿಯಲ್ಲ ಎಂದು ಟೀಕಿಸಿದರು.