ಪ್ರಧಾನಿ ಮೋದಿ ಚಿತ್ರ ಬಿಡುಗಡೆಗೆ ತಡೆ ಕೋರಿ ರಿಟ್ ಆರ್ಜಿ

ಬೆಂಗಳೂರು, ಏ.1-ರಾಜ್ಯದಲ್ಲಿ ಪಿಎಂ ನರೇಂದ್ರ ಮೋದಿ ಚಿತ್ರ ಬಿಡುಗಡೆಗೆ ತಡೆ ಕೋರಿ ರಿಟ್ ಅರ್ಜಿ ಸಲ್ಲಿಸಲಾಗಿದೆ.

ವಕೀಲ ರಮೇಶ್‍ನಾಯ್ಕ ಎಂಬುವರು ಪಿಎಂ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ ಬಿಡುಗಡೆಯಿಂದ ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ.ಅಲ್ಲದೆ ಚಿತ್ರ ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ವಾದಿಸಿದ್ದಾರೆ.

ಹೀಗಾಗಿ ಚುನಾವಣೆ ಮುಗಿದ ಬಳಿಕ ಚಿತ್ರ ಬಿಡುಗಡೆ ಮಾಡುವಂತೆ ಅವರು ಒತ್ತಾಯಿಸಿದ್ದಾರೆ.ರಾಜ್ಯದಲ್ಲಿ ಪಿಎಂ ನರೇಂದ್ರ ಮೋದಿ ಚಿತ್ರ ಏ. 12ರಂದು ಬಿಡುಗಡೆಯಾಗುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ