ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರ ಬಿಡುಗಡೆಗೆ ತಡೆಕೋರಿ ಹೈಕೋರ್ಟ್ ನಲ್ಲಿ ಅರ್ಜಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧರಿತ ಚಿತ್ರ ಪಿಎಂ ನರೇಂದ್ರ ಮೋದಿ ಬಿಡುಗಡೆಗೆ ತಡೆ ಕೋರಿ ರಾಜ್ಯ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ವಕೀಲ ರಮೇಶ್​ ನಾಯ್ಕ್​ ಅವರು ಚಿತ್ರ ಬಿಡುಗಡೆಗೆ ತಡೆ ಕೋರಿ ಪಿಐಎಲ್ ಸಲ್ಲಿಸಿದ್ದಾರೆ.

ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ಸಂದರ್ಭದಲ್ಲಿ ಚಿತ್ರ ಬಿಡುಗಡೆಯಾದರೆ ಮತದಾರರ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ, ಚುನಾವಣೆ ಮುಗಿಯುವವರೆಗೂ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

High Court,PIL, PM Modi biopic

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ