ಹಾಸನ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಕಾರನ್ನು ಹಾಸನ ಗಡಿ ಹಿರೀಸಾವೆ ಚೆಕ್ ಪೋಸ್ಟ್ ನಲ್ಲಿ ತಡೆದು ಚುನಾಚಣಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
ಸಿಎಂ ಕುಮಾರಸ್ವಾಮಿ ಅವರು ಜಿಲ್ಲೆಯ ಚನ್ನರಾಯಪಟ್ಟಣಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಹಿರೀಸಾವೆ ಚೆಕ್ ಪೋಸ್ಟ್ ಬಳಿ ಸಿಎಂ ಕಾರು ಬರುತ್ತಿದ್ದಂತೆಯೇ, ಅದನ್ನು ತಡೆದು ಪೊಲೀಸ್ ಹಾಗೂ ಚುನಾವಣಾ ಸಿಬ್ಬಂದಿ ವಾಹನವನ್ನು ತಪಾಸಣೆ ಮಾಡಿದ್ದಾರೆ.
ಕುಮಾರಸ್ವಾಮಿ ಅವರು ಶಿವಮೊಗ್ಗಕ್ಕೆ ಹೋಗುವ ಮಾರ್ಗದಲ್ಲಿ ಚನ್ನರಾಯಪಟ್ಟಣದಲ್ಲಿರುವ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಮನೆಗೆ ಹೋಗಿದ್ದರು.
ಅಲ್ಲಿ ಉಪಹಾರ ಸೇವನೆ ಬಳಿಕ ಕಾರ್ಯಕರ್ತರೊಂದಿಗೆ ಚುನಾವಣೆ ಸಂಬಂಧ ಚರ್ಚೆ ನಡೆಸಿದ್ದಾರೆ. ಬಳಿಕ ಅರಸೀಕೆರೆ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳಲಿದ್ದಾರೆ.
ಚನ್ನರಾಯಪಟ್ಟಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಇಂದು ಶಿವಮೊಗ್ಗದಲ್ಲಿ ಮದುಭಂಗಾರಪ್ಪ ನಾಮಪತ್ರ ಸಲ್ಲಿಸಲಿದ್ದಾರೆ. ಅಲ್ಲಿಂದ ಕುಂದಾಪುರದಲ್ಲಿ ಮೀನುಗಾರರ ಸಮಾವೇಶ ಇದೆ. ಹೀಗಾಗಿ ಗೋಕರ್ಣದಲ್ಲಿ ವಾಸ್ತವ್ಯ ಮಾಡುತ್ತೇನೆ. ಇಂದಿನ ಲೋಕಸಭಾ ಚುನಾವಣೆಯಲ್ಲಿ ನಮ್ಮೆಲ್ಲ ಅಭ್ಯರ್ಥಿಗಳು ಯಾರು ಕಣದಲ್ಲಿದ್ದಾರೆ. ಅವರೆಲ್ಲರ ಕ್ಷೇತ್ರಗಳಿಗೂ ಭೇಟಿ ನೀಡುತ್ತೇನೆ. ನಮಗೆ ಹೆಲಿಕಾಪ್ಟರ್ ಭೇಟಿ ಬಳಸುವುದಕ್ಕೆ ಬಿಜೆಪಿ-ಕೇಂದ್ರ ಸರ್ಕಾರ ತಡೆ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.