ತಿರುವನಂತಪುರಂ: ಕೇರಳದ ವಯನಾಡ್ ನಿಂದಲೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸುವುದಾಗಿ ಘೋಷಿಸಿದ ಬೆನ್ನಲ್ಲೇ ವಯನಾಡ್ ಅಖಾಡ ರಂಗೇರಿದೆ. ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಸೌರ ಹಗರಣದ ಪ್ರಮುಖ ಆರೋಪಿ ಸರಿತಾ ಎಸ್. ನಾಯರ್ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.
ತಮಗೆ ಲೈಂಗಿಕ ಕಿರುಕುಳ ನೀಡಿದ್ದ ಕೇರಳ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡು ಸಾಕಷ್ಟು ಬಾರಿ ಪತ್ರ ಬರೆದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಸರಿತಾ ಹೇಳಿದ್ದಾರೆ.
ಸೋಲಾರ್ ಹಗರಣದ ಪ್ರಮುಖ ಆರೋಪಿಯಾಗಿರುವ ಸರಿತಾ ನಾಯರ್ ಅವರು ಅಂದಿನ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹಾಗೂ ಅವರ ಕ್ಯಾಬಿನೆಟ್ ಸದಸ್ಯರಿಗೆ 1.90 ಕೋಟಿ ರು ಲಂಚ ನೀಡಿರುವುದಾಗಿ ನ್ಯಾಯಾಂಗ ಸಮಿತಿ ಮುಂದೆ ಹೇಳಿಕೆ ನೀಡಿದ್ದರು.
Solar scam,Saritha Nair,Wayanad,contest against Rahul Gandhi