ಮೈತ್ರಿ ಸರ್ಕಾರ 3-4 ಸ್ಥಾನಗಳನ್ನು ಗೆಲ್ಲುವುದಿಲ್ಲ-ಮಾಜಿ ಸಚಿವ ಶ್ರೀರಾಮುಲು

ಕೊಪ್ಪಳ, ಏ.3- ಮೈತ್ರಿ ಸರ್ಕಾರ 3-4ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಇಂದಿಲ್ಲಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಗೆಲ್ಲುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸೋಲಿನ ಭಯ ಕಾಡುತ್ತಿದೆ ಎಂದರು.

ಲೋಕಸಭಾ ಚುನಾವಣೆ ಬಳಿಕ ಒಳ್ಳೆಯದಿನಗಳು ಬರಲಿವೆ. ಕೇಂದ್ರ ಮತ್ತು ರಾಜ್ಯದಲ್ಲಿ ಕಮಲ ಅರಳಿಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ