ಬೆಂಗಳೂರು,ಏ.3- ಬಹುನಿರೀಕ್ಷಿತ ಪ್ರಧಾನಿ ನರೇಂದ್ರಮೋದಿ ಅವರ ಜೀವನಾಧಾರಿತ ಕುರಿತ ಚಿತ್ರ ಬಿಡುಗಡೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪಿಎಂ ನರೇಂದ್ರ ಮೋದಿ ಅವರ ಚಿತ್ರ ಬಿಡುಗಡೆ ತಡೆ ಕೋರಿ ವಕೀಲ ರಮೇಶ್ ನಾಯಕ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿ ಆಯೋಗದ ಮುಂದೆ ಹೋಗಲು ಸಲಹೆ ನೀಡಿದೆ.
ಚಿತ್ರ ಬಿಡುಗಡೆಯಾದರೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಹಾಗಾಗಿ ತಡೆ ನೀಡಬೇಕೆಂದು ವಕೀಲರು ಮಾಡಿದ ಮನವಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಅಭಿಪ್ರಾಯಪಟ್ಟ ಹಾಗಾಗಿ ಹಂಗಾಮಿ ಸಿಜೆ ಅವರ ವಿಭಾಗೀಯ ಪೀಠ ಈ ಅರ್ಜಿಯನ್ನು ವಜಾ ಮಾಡಿದೆ.
ಚಿತ್ರ ಬಿಡುಗಡೆ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ. ಈ ಸಂಬಂಧ ನಿಮ್ಮ ತಕರಾರರು ಇದ್ದರೆ ನೀವು ಚುನಾವಣಾ ಆಯೋಗದ ಮುಂದೆ ಹೋಗಿ ಬಗೆಹರಿಸಿಕೊಳ್ಳಿ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.