ಕಾಂಗ್ರೇಸ್‍ನ ಪ್ರಣಾಳಿಕೆ ಸುಳ್ಳುಗಳ ಭರವಸೆಯ ಮಹಾಪೂರವಾಗಿದೆ-ಮಾಜಿ ಸಿ.ಎಂ.ಯಡಿಯೂರಪ್ಪ

ಕಲಬುರಗಿ,ಏ.3-ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸುಳ್ಳುಗಳ ಭರವಸೆಯ ಮಹಾಪೂರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಸಿದ್ದಾರೆ.

ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ದ್ರೋಹ ಪ್ರಕರಣ ಕೈಬಿಡುತ್ತೇವೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವುದು ಮೂರ್ಖತನದ ಪರಮಾವಧಿಯಾಗಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ 22ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ದೇಶದಲ್ಲಿ 300ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಜಯಗಳಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು.

ಹಾಸನದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು ನಿಶ್ಚಿತ. ಅದೇ ರೀತಿ ಮಂಡ್ಯದಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಜಯಗಳಿಸುವುದರಲ್ಲಿ ಅನುಮಾನವಿಲ್ಲ.

ತುಮಕೂರಿನಲ್ಲಿ ದೇವೇಗೌಡರಿಗೆ ಕಠಿಣ ಸ್ಪರ್ಧೆ ನೀಡಲಿದ್ದೇವೆ ಎಂದರು.

ಕಲಬುರಗಿಯಲ್ಲಿ ಉಮೇಶ್ ಜಾಧವ್ ಅತ್ಯಂತ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ