ವಯನಾಡಿನಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ

ವಯನಾಡು: ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಕೇರಳದ ವಯನಾಡ್ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಸಾಂಪ್ರದಾಯಿಕ ಕ್ಷೇತ್ರ ಅಮೇಠಿಯಲ್ಲಿ ಸ್ಪರ್ಧಿಸುತ್ತಿರುವ ರಾಹುಲ್​ ಗಾಂಧಿ, ಈ ಬಾರಿ ಎರಡನೇ ಕ್ಷೇತ್ರವಾಗಿ ಕೇರಳದ ವಯನಾಡಿನಿಂದಲೂ ಸ್ಪರ್ಧಿಸುತ್ತಿದ್ದು, ಈ ಹಿನ್ನಲೆಯಲ್ಲಿ ಬೆಳಿಗ್ಗೆ ಕೋಳಿಕ್ಕೋಡ್ ಗೆ ಬಂದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾಧ್ರಾ, ಅಲ್ಲಿಂದ ಹೆಲಿಕಾಫ್ಟರ್ ಮೂಲಕ ವಯನಾಡ್ ಗೆ ತೆರಳಿದರು.

ನಂತರ ರೋಡ್‌ ಶೋ ಮೂಲಕ ಅಭಿಮಾನಿಗಳು, ಕಾರ್ಯಕರ್ತರೊಂದಿಗೆ ಕಲ್ಪೆಟ್ಟ ಎಂಬಲ್ಲಿರುವ ವಯನಾಡು ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ತೆರಳಿದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ರಾಹುಲ್‌ ಗಾಂಧಿ ಅವರೊಂದಿಗೆ ಆಪ್ತರೂ, ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿಯೂ ಆಗಿರುವ ಕೆ.ಸಿ ವೇಣುಗೋಪಾಲ್‌ ಇದ್ದರು.

ಮೆರವಣಿಗೆಯ ಉದ್ದಕ್ಕೂ ಜನರು ರಸ್ತೆಯ ಇಕ್ಕೆಲಗಳಲ್ಲೂ ಕಿಕ್ಕಿರಿದು ತಮ್ಮ ನೆಚ್ಚಿನ ನಾಯಕನಿಗೆ ಶುಭ ಕೋರಿದರು. ಬಿಳಿ ಶರ್ಟ್‌ ಮತ್ತು ಪಂಚೆ ಉಟ್ಟಿದ್ದ ರಾಹುಲ್‌ ಗಾಂಧಿ ಅಪ್ಪಟ ಕೇರಳ ರಾಜಕಾರಣಿಯಂತೆ ಕಂಗೊಳಿಸುತ್ತಿದ್ದುದು ವಿಶೇಷವಾಗಿತ್ತು.

Congress President Rahul Gandhi Files Nomination From Wayanad

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ