ವಯನಾಡು: ಕೇರಳದ ವಯನಾಡಿನಿಂದಲೂ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಲೋಕಸಭಾ ಚುನಾವಣೆಯಲ್ಲಿ ಭಾರೀ ಎದುರಾಳಿಗಳು ಕಣಕ್ಕೆ ನಿಂತಿದ್ದಾರೆ. ರಾಹುಲ್ ಗಾಂಧಿ ಹೆಸರಿನ ಮತ್ತಿಬ್ಬರು ಸ್ಪರ್ಧಿಗಳು ವಯನಾಡ್ ನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಈಗಾಗಲೇ ವಯನಾಡ್ ನಿಂದ ಒಂದೆಡೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದೆ. ಇನ್ನೊಂದೆಡೆ ಸೌರ ಹಗರಣದ ಪ್ರಮುಖ ಆರೋಪಿ ಸರಿತಾ ಎಸ್ ನಾಯರ್ ರಾಹುಲ್ ಗೆ ಪೈಪೋಟಿಯೊಡ್ಡಲು ಮುಂದಾಗಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಯನಾಡಿನಿಂದ ಕಣಕ್ಕಿಳಿಯುವುದು ಖಚಿತವಾಗುತ್ತಿದ್ದಂತೆ ಇನ್ನಿಬ್ಬರು ರಾಹುಲ್ ಗಾಂಧಿಗಳು ಕೂಡ ನಾಮಪತ್ರ ಸಲ್ಲಿಸಿದ್ದಾರೆ.
ಕೇರಳ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿರುವ ಎರುಮೆಲೆ ನಿವಾಸಿ ರಾಹುಲ್ ಗಾಂಧಿ ಕೆ.ಇ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅಖಿಲ ಭಾರತ ಮಕ್ಕಳ್ ಘಟಕದಿಂದ ರಾಹುಲ್ ಗಾಂಧಿ ಕೆ. ಎಂಬುವವರೂ ನಾಮಪತ್ರ ಸಲ್ಲಿಸಿದ್ದಾರೆ. ಇವರನ್ನು ಹೊರತು ಪಡಿಸಿ ಕೆ.ಎಂ. ಶಿವಪ್ರಸಾದ್ ಗಾಂಧಿ ಎಂಬುವವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅಂತಿಮವಾಗಿ ವಯನಾಡು ಲೋಕಸಭೆ ಕ್ಷೇತ್ರದಲ್ಲಿ 25 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
lok sabha election,wayanad,three rahul gandhi,nomination file