ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ-ಮಾಜಿ ಸಿ.ಎಂ.ಎಸ್.ಎಂ.ಕೃಷ್ಣ

ಹಾಸನ,ಏ.5-ವಿಪಕ್ಷ ನಾಯಕರು ಮೋದಿ ಸರ್ಕಾರ ಏನು ಮಾಡಿಲ್ಲ ಎಂದು ಅಪಪ್ರಚಾರ ನಡೆಸುತ್ತಿದ್ದಾರೆ, ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಇಂದಿಲ್ಲಿ ಕಿಡಿಕಾರಿದ್ದಾರೆ.

ಬಿಜೆಪಿ ಅಭ್ಯರ್ಥಿ ಮಂಜು ಪರ ಇಂದು ಪ್ರಚಾರ ನಡೆಸಲು ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಸರ್ಕಾರದ ವೈಫಲ್ಯಗಳು ಎಲ್ಲರಿಗೂ ತಿಳಿದಿದೆ. ಅದನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ.ಪ್ರಜ್ಞಾವಂತ ಜನರಿಗೆ ಇದೆಲ್ಲ ತಿಳಿದಿದೆ. ಪ್ರಧಾನಿ ಮೋದಿ ಅವರ ಪರ ದೇಶದೆಲ್ಲೆಡೆ ಅಲೆ ಇದ್ದು, ಅವರ ನೇರ ಹಾಗೂ ನಿಸ್ವಾರ್ಥ ಕೆಲಸಗಳು ಎಲ್ಲರಿಗೂ ಮೆಚ್ಚುಗೆಯಾಗಿದೆ. ಅವರು ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ ಎಂದು ಹೇಳಿದರು

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ