ರಿಯಲ್ ಎಸ್ಟೇಟ್ ಏಜೆಂಟ್ ರಮೇಶ್ ಕೊಲೆ ಆರೋಪಿ-ಶೀಘ್ರವೇ ಬಂಧಿಸಲಾಗುವುದು-ಡಿಸಿಪಿ ರವಿ ಚನ್ನಣ್ಣನವರ್

ಬೆಂಗಳೂರು,ಏ.8- ರಿಯಲ್ ಎಸ್ಟೇಟ್ ಏಜೆಂಟ್ ರಮೇಶ್ ಎಂಬುವರನ್ನು ಹತ್ಯೆ ಮಾಡಿ ಪರಾರಿಯಾಗಿರುವ ಆರೋಪಿಗಳ ಸುಳಿವು ಲಭ್ಯವಾಗಿದ್ದು, ಆದಷ್ಟು ಬೇಗ ಬಂಧಿಸಲಾಗುವುದು ಎಂದು ಪಶ್ಚಿಮ ವಿಭಾಗದ ಡಿಸಿಪಿ ರವಿ ಚನ್ನಣ್ಣನವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಲೆ ಆರೋಪಿಗಳ ಬಂಧನಕ್ಕೆ ಈಗಾಗಲೇಎರಡು ವಿಶೇಷ ತಂಡಗಳನು ರಚಿಸಲಾಗಿದ್ದು, ಈ ತಂಡಗಳು ತಮಿಳುನಾಡು ಆಂಧ್ರಪ್ರದೇಶ ಸೇರಿದಂತೆ ಇನ್ನಿತರ ಕಡೆ ತೆರಳಿ ಕಾರ್ಯಾಚರಣೆ ಕೈಗೊಂಡಿದ್ದು, ಆದಷ್ಟು ಶೀಘ್ರ ಬಂಧಿಸಲಾಗುವುದು ಎಂದರು.

ಹಣಕಾಸು ವಿಚಾರದಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಕೊಲೆ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

ಹೊಸಕೆರೆಹಳ್ಳಿಯಲ್ಲಿ ವಾಸವಾಗಿದ್ದ ರಮೇಶ್ ಯುಗಾದಿ ಹಬ್ಬದದಿನ ಸಂಜೆ ಹೊರಗೆ ಹೋಗಿದ್ದರು. ಮನೆಯಿಂದ ಅದು ರಾತ್ರಿ ಸ್ನೇಹಿತರೊಟ್ಟಿಗೆ ಜೂಜಾಡುತ್ತಿದ್ದಾಗ ಹಣಕಾಸು ವಿಚಾರವಾಗಿ ಜಗಳ ನಡೆದಿದೆ.ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಸ್ನೇಹಿತರೇ ರಮೇಶ್‍ಗೆ ರಾಡಿನಿಂದ ಹೊಡೆದು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ