ಶ್ರೀನಗರ: ಈಬಾರಿಯ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೆಲುವು ಸಾಧಿಸಬೇಕೆಂಬ ಉದ್ದೇಶದಿಂದ ಪುಲ್ವಾಮಾ ಆತ್ಮಾಹುತಿ ಬಾಂಬ್ ದಾಳಿಯನ್ನು ಕೇಂದ್ರ ಸರ್ಕಾರ ತಡೆಯಲಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ನ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಗಂಭೀರ ಆರೋಪ ಮಾಡಿದ್ದಾರೆ.
ಪುಲ್ವಾಮಾ ದಾಳಿಯ ಕುರಿತು ಕೇಂದ್ರ ಸರ್ಕಾರಕ್ಕೆ ಮೊದಲೇ ಮಾಹಿತಿ ಇತ್ತು. ದಾಳಿಯಲ್ಲಿ ಬಳಸಲಾದ ಸ್ಫೋಟಕಗಳು ಎಲ್ಲಿಂದ ಬಂದಿದ್ದವು ಎಂಬುದೂ ತಿಳಿದಿತ್ತು. ಆದರೆ ಮೋದಿ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂಬ ಕಾರಣದಿಂದ ಪುಲ್ವಾಮಾ ದಾಳಿ ನಡೆಯಲು ಅನುವು ಮಾಡಿಕೊಟ್ಟಿದ್ದಾರೆ. ಈ ಮೂಲಕ 40 ಯೋಧರನ್ನು ಬಲಿ ಪಡೆದಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ವಾಗ್ದಾಳಿ ನಡೆಸಿದ್ದಾರೆ.
ನಮ್ಮದಲ್ಲದ ತಪ್ಪಿಗೆ ನಮಗೆ ಶಿಕ್ಷೆ ನೀಡಲಾಗುತ್ತಿದೆ. ನಾವು ಸ್ವತಂತ್ರ ದೇಶದಲ್ಲಿ ವಾಸಿಸುತ್ತಿದ್ದೇವೋ ಅಥವಾ ವಸಾಹತುವಿನಲ್ಲಿ ವಾಸಿಸುತ್ತಿದ್ದೇವೋ ತಿಳಿಯುತ್ತಿಲ್ಲ. ಕೇಂದ್ರ ಸರ್ಕಾರ ರಾಜ್ಯದಲ್ಲಿ ಹೋರಾಟ ತೀವ್ರಗೊಳ್ಳುವ ಮುನ್ನ ತನ್ನ ಆದೇಶವನ್ನು ವಾಪಸ್ ಪಡೆಯಬೇಕು ಹೆದ್ದಾರಿ ಬಂದ್ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸಿದರು.
Centre Allowed Pulwama Attack To Help PM Win Election: Farooq Abdullah