ಮತದಾನ ಬಹಿಷ್ಕಾರಕ್ಕೆ ಮುಂದಾದ ಆತಲಟ್ಟಿ ಗ್ರಾಮಸ್ಥರು

ವಿಜಯಪುರ,ಏ.9- ಕುಡಿಯುವ ನೀರಿನ ಸಮಸ್ಯೆ ನಿವಾರಿಸುವಲ್ಲಿ ವಿಫಲವಾಗಿರುವ ರಾಜಕಾರಣಿಗಳ ವಿರುದ್ಧ ಬೇಸತ್ತಿರುವ ಕೃಷ್ಣಾ ನದಿ ತೀರದ ಆತಲಟ್ಟಿ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ನಮ್ಮ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ವಿಫಲವಾಗಿವೆ.

ದಶಕಗಳಿಂದ ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದೇವೆ. ಸಂಸದರು ಮತ್ತು ಕೇಂದ್ರ ಸಚಿವರಾಗಿದ್ದ ರಮೇಶ್ ಜಿಗಜಿಣಗಿಯವರಿಗೆ ನಮ್ಮ ಸಮಸ್ಯೆ ಹೇಳಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ನಾವು ಯಾರಿಗೆ ಮತ ಹಾಕಿ ಏನು ಪ್ರಯೋಜನ ಎಂದು ಮತದಾನ ಬಹಿಷ್ಕಾರ ಎಚ್ಚರಿಕೆ ನೀಡಿದ್ದಾರೆ.

ಕೃಷ್ಣ ನದಿ ತಟದಲ್ಲಿದ್ದೇವೆ. ಆದರೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದೇವೆ. ನದಿಯಿಂದ ಪೈಪ್‍ಲೈನ್ ಮುಖಾಂತರ ನೀರು ಹರಿಸಬೇಕೆಂದು ಒತ್ತಾಯಿಸುತ್ತಿದ್ದೇವೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಏ.23ರಂದು ವಿಜಯಪುರ ಲೋಕಸಭಾ ಚುನಾವಣೆ ನಡೆಯಲಿದೆ.ಬಿಜೆಪಿಯ ರಮೇಶ್ ಜಿಗಜಿಣಗಿ, ಜೆಡಿಎಸ್, ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಡಾ.ಸುನೀತಾ ಚೌವ್ಹಾಣ್ ಕಣದಲ್ಲಿದ್ದಾರೆ.ಗ್ರಾಮಸ್ಥರು ಮತದಾನ ಬಹಿಷ್ಕರಿಸಿರುವುದು ತಲೆನೋವಾಗಿ ಪರಿಣಮಿಸಿದೆ.ಮೂಲಭೂತ ಸೌಕರ್ಯಗಳ ಕೊರತೆ ಒಂದು ಗ್ರಾಮದ ಸಮಸ್ಯೆಯಲ್ಲ. ಬಹುತೇಕ ಕಡೆ ಇಂತಹ ಸಮಸ್ಯೆಗಳಿದೆ.ಚುನಾವಣಾ ಸಂದರ್ಭದಲ್ಲಿ ಇವರು ಹೊರಬರುತ್ತವೆ. ಕೆಲವರು ತಮ್ಮ ಆಕ್ರೋಶದ ಮೂಲಕ ಹೊರ ಹಾಕುತ್ತಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ