ಮುಂದಿನ ವಾರ ನಮ್ಮ ಕುಟುಂಬದ ಬಗ್ಗೆ ಅಪಪ್ರಚಾರ ಮಾಡುವ ಸಾಧ್ಯತೆ-ಸುಮಲತಾ ಅಂಬರೀಶ್

ಮಂಡ್ಯ, ಏ.9- ಮುಂದಿನ ವಾರ ನಮ್ಮ ಕುಟುಂಬದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಬಿಂಬಿಸುವ ಯತ್ನ ನಡೆಯುತ್ತಿದೆ ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದಿಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ಪ್ರಚಾರದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನನ್ನ ಕುಟುಂಬದ ಬಗ್ಗೆ ಅಪಪ್ರಚಾರ ಮಾಡುವ ಸಾಧ್ಯತೆ ಇದ್ದು, ಅದಕ್ಕಾಗಿ ನಮ್ಮ ಮನೆಯ ಕೆಲಸಗಾರರನ್ನು ಸಂಪರ್ಕಿಸಲಾಗಿದೆ. ಅವರಿಗೆ ವಿದೇಶ ಪ್ರವಾಸದ ಜತೆಗೆ 10 ರಿಂದ 15 ಲಕ್ಷ ಆಫರ್ ನೀಡಲಾಗಿದೆ ಎಂದು ಬಾಂಬ್ ಸಿಡಿಸಿದ್ದಾರೆ.

ಇಷ್ಟೊಂದು ಕೆಟ್ಟ ರಾಜಕಾರಣವನ್ನು ನಾನು ನೋಡಿಲ್ಲ. ಇದೆಲ್ಲ ನನ್ನಿಂದಲೇ ಕೊನೆಯಾದರೆ ಸಂತೋಷ.

ಇದಕ್ಕೆಲ್ಲ ಅಂತ್ಯ ಹಾಡಬೇಕೆಂದು ಅವರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ