ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ “ಪಿಎಂ ನರೇಂದ್ರ ಮೋದಿ” ಚಿತ್ರ ಬಿಡುಗಡೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಈ ಮೂಲಕ ಮೋದಿ ಬಯೋಪಿಕ್ ಬಿಡುಗಡೆಗೆ ಇದ್ದ ಅಡ್ಡಿ ನಿವಾರಣೆಯಾದಂತಾಗಿದೆ.
ಚಲನಚಿತ್ರ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆಯೇ ಎಂದು ನಿರ್ಧರಿಸುವುದು ಚುನಾವಣಾ ಆಯೋಗದ ಜವಾಬ್ದಾರಿ ಎಂದು ನ್ಯಾಯಾಲಯ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠವು ಕಾಂಗ್ರೆಸ್ ನ ಕಾರ್ಯಕರ್ತ ಅಮನ್ ಪನ್ವಾರ್ ಅವರ ಅರ್ಜಿಯನ್ನು ತಿರಸ್ಕರಿಸಿದೆ.”ನಾವು ಚಲನಚಿತ್ರವನ್ನು ನೋಡಿಲ್ಲ. ಚಿತ್ರದ ವಿಷಯಗಳನ್ನು ನಾವು ತಿಳಿದಿಲ್ಲ. ನಮಗೇನೂ ಗೊತ್ತಿಲ್ಲದೆ ನಾವು ಹೇಗೆ ಚಿತ್ರ ಬಿಡುಗಡೆಗೆ ತಡೆ ನೀಡುವುದು? ಎಂದು ಮುಖ್ಯ ನ್ಯಾಯಮೂರ್ತಿ ಗೊಗೊಯ್ ಪ್ರಶ್ನಿಸಿದ್ದಾರೆ.
ಚಿತ್ರಕ್ಕೆ ಸೆನ್ಸಾರ್ ಮಂಡಳಿ ಇನ್ನೂ ಪ್ರಮಾಣಪತ್ರ ನೀಡಿಲ್ಲ ಹಾಗಾಗಿ ಚಿತ್ರ ಬಿಡುಗಡೆಯ ವಿಚಾರವಾಗಿ ತಾನು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್ ನಿನ್ನೆ ಸೂಚಿಸಿತ್ತು.
supreme court dismisses plea seeking stay on pm modis biopic