ಬೆಂಗಳೂರು, ಏ.10- ಬಾಂಬೆ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಎ.ಎಸ್.ಒಕಾ ಅವರನ್ನು ಕರ್ನಾಟಕ ರಾಜ್ಯ ಹೈಕೊರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿದೆ.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಸೇರಿ ಇಬ್ಬರಿಗೆ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ನೀಡಲು ಕೊಲೀಜಿಯಂ ಶಿಫಾರಸು ಮಾಡಿದೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಹೊಂದಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನ ತೆರವುಗೊಂಡಿತ್ತು.
ಈ ಸ್ಥಾನಕ್ಕೆ ಹಿರಿಯ ನ್ಯಾಯಮೂರ್ತಿಯಾದ ಎ.ಎಸ್.ಒಕಾ ಅವರನ್ನು ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಕೊಲಿಜಿಯಂ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಅವರನ್ನು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿದೆ.