
ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಶ್ರೀ ಮುರಳೀಧರ್ ರಾವ್ ಅವರು ಇಂದು(10.04.2019), ಬುಧವಾರದಂದು “ರಾಜ್ಯದ ಯುವಕರು, ಐಟಿ ಉದ್ಯೋಗಿಗಳ ಮತ್ತು ವಿವಿಧ ಕ್ಷೇತ್ರದ ತಜ್ಞರೊಂದಿಗೆ ನಡೆಯುವ ಸಂವಾದ ಕಾರ್ಯಕ್ರಮಕ್ಕೆ ದೀಪ ಹಚ್ಚುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಡಾ.ಅಶ್ವತ್ಥ ನಾರಾಯಣ, ರಾಜ್ಯ ಸಹವಕ್ತಾರ ಶ್ರೀ ಎ.ಹೆಚ್.ಆನಂದ, ಬೆಂಗಳೂರು ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀ ಸಪ್ತಗಿರಿ ಗೌಡ, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.