ದಿನೇಶ್ ಗುಂಡುರಾವ್ ಹೆಲಿಕಾಪ್ಟರನ್ನು ಪರಿಶೀಲಿಸಿದ ಚುನಾವಣಾಧಿಕಾರಿಗಳು

ದಾವಣಗೆರೆ, ಏ.10-ಚುನಾವಣಾ ಪ್ರಚಾರಕ್ಕಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಆಗಮಿಸಿದ್ದ ವೇಳೆ ಅವರು ಬಂದ ಹೆಲಿಕಾಪ್ಟರ್‍ನ್ನು ಚುನಾವಣಾಧಿಕಾರಿಗಳು ಪರಿಶೀಲಿಸಿದ್ದಾರೆ.

ಇಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಂಜಪ್ಪ ಪರ ಪ್ರಚಾರಕ್ಕೆ ಆಗಮಿಸಿದ್ದ ದಿನೇಶ್ ಗುಂಡೂರಾವ್ ಅವರ ಹೆಲಿಕಾಪ್ಟರ್‍ನ್ನು ಪರಿಶೀಲನೆಗೆ ಒಳಪಡಿಸಿದರು.

ನಗರದ ಐಟಿಐ ಕಾಲೇಜು ಮೈದಾನದಲ್ಲಿ ಬಂದಿಳಿದ ಅವರ ಹೆಲಿಕಾಪ್ಟರ್‍ನ್ನು ಚುನಾವಣಾಧಿಕಾರಿಗಳು ಪರಿಶೀಲಿಸಿದರು.

ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಹದ್ದಿನ ಕಣ್ಣಿಟ್ಟಿರುವ ಚುನಾವಣಾಧಿಕಾರಿಗಳು ಇತ್ತೀಚೆಗಷ್ಟೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕಾರಿನ ತಪಾಸಣೆಯನ್ನೂ ನಡೆಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ