ಕುಂದಗೋಳ ಏ.10-ಶಿವಳ್ಳಿಯವರ ನಿಧನದಿಂದ ತೆರವಾದ ಕುಂದಗೋಳ ಕ್ಷೇತ್ರಕ್ಕೆ ಮೇ.19ರಂದು ಚುನಾವಣೆ ಘೋಷಣೆಯಾದ ಹಿನ್ನೆಲೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಳ್ಳಿಯವರ ಪತ್ನಿ ಕುಸುಮ ಅವರು, ನನಗೆ ಚುನಾವಣೆ ಬಗ್ಗೆ ಏನೂ ಗೊತ್ತಿಲ್ಲ. ಜನ ಬಯಸಿದರೆ, ಪಕ್ಷ ಅವಕಾಶ ನೀಡಿದರೆ ಚುನಾವಣೆಗೆ ಸ್ಪರ್ಧಿಸುತ್ತೇನೆ. ಕ್ಷೇತ್ರದ ಜನರು ಹೇಗೆ ಹೇಳುತ್ತಾರೋ ಹಾಗೆ ಕೇಳುತ್ತೇನೆ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಗಮನಹರಿಸುತ್ತೇನೆ ಎಂದರು.
ನನ್ನ ಪತಿ ಶಿವಳ್ಳಿಯವರು ರಾಜಕೀಯ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಇದ್ದಾರೆ.ಅವರೊಂದಿಗೆ ನಾನು ಹೆಜ್ಜೆ ಹಾಕಿದ್ದೇನೆ. ಜನರ ನಾಡಿಮಿಡಿತ ಗೊತ್ತಿದೆ ಎಂದು ಹೇಳಿದರು.
ಕುಸುಮ ಅವರಿಗೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ಕೂಡ ಚಿಂತನೆ ನಡೆಸಿದೆ ಎನ್ನಲಾಗಿದೆ.