ಬೆಂಗಳೂರು, ಏ.10- ಪ್ರಸಕ್ತ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ರಾಜ್ಯ ನೇಕಾರರ ಮಹಾಸಭಾ ತೀರ್ಮಾನಿಸಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೈ ಮಗ್ಗ ವೃತ್ತಿಯನ್ನು ಗುರುತಿಸಿ ರಾಷ್ಟ್ರೀಯ ಕೈ ಮಗ್ಗ ದಿನ ಘೋಷಣೆ ಮಾಡಿರುವುದನ್ನು ಪರಿಗಣನೆ ಮಾಡಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲಾಗುವುದು ಎಂದು ಮಹಾಸಭಾದ ಅಧ್ಯಕ್ಷ ಬಿ.ಎಸ್.ಸೋಮಶೇಖರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.
ನಮ್ಮ ಸಮುದಾಯಕ್ಕೆ ಮುದ್ರಾ ಯೋಜನೆ, ಗ್ಯಾಸ್ ಸಂಪರ್ಕ, ಅಟಲ್ ಪಿಂಚಣಿ ಯೋಜನೆ, ಜನ್-ಧನ್ , ಉಜ್ವಲ, ಸ್ವಯಂ ಉದ್ಯೋಗ ಯೋಜನೆ ಸೇರಿದಂತೆ ಹಲವಾರು ಜನಪ್ರಿಯ ಯೋಜನೆಗಳನ್ನು ಮೋದಿ ಸರ್ಕಾರ ಕೈಗೆತ್ತಿಕೊಂಡಿದೆ.
ಅದೇ ರೀತಿ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನೇಕಾರರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು.ಆದರೆ ಈಗಿನ ಆಡಳಿತ ನಮ್ಮ ಸಮುದಾಯವನ್ನು ಕಡೆಗಣಿಸಿದೆ.ಹೀಗಾಗಿ ಬಿಜೆಪಿ ಬೆಂಬಲ ಅನಿವಾರ್ಯವಾಗಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಎ.ವಿಜಯಕುಮಾರ್, ಪದಾಧಿಕಾರಿಗಳಾದ ನವೀನ್ ಚಿಲ್ಲಾಳ್, ತೋಟಪ್ಪ ಕೆ.ಶೇಖ, ಕೃಷ್ಣಪ್ಪ ಮತ್ತಿತರರು ಹಾಜರಿದ್ದರು.